ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: ಓರ್ವ ಪೊಲೀಸ್ ಮೃತ್ಯು, ನಾಲ್ವರಿಗೆ ಗಾಯ

ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ನಿಶಾತ್ ಪಾರ್ಕ್ ಬಳಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ndtv.com ವರದಿ ಮಾಡಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗ್ರೆನೇಡ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ ಎಂದು ವರದಿಗಳು ತಿಳಿಸಿವೆ.
Next Story





