Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಅಹ್ಮದ್ ನೂರಿ ಜನ್ಮ...

ಮಂಗಳೂರು: ಅಹ್ಮದ್ ನೂರಿ ಜನ್ಮ ಶತಮಾನೋತ್ಸವ ಆಚರಣೆ

ಟಿ.ಎ. ಆಲಿಯಬ್ಬ ಜೋಕಟ್ಟೆಗೆ ಅಹ್ಮದ್ ನೂರಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Feb 2022 10:22 PM IST
share
ಮಂಗಳೂರು: ಅಹ್ಮದ್ ನೂರಿ ಜನ್ಮ ಶತಮಾನೋತ್ಸವ ಆಚರಣೆ

ಮಂಗಳೂರು, ಫೆ.11: ಬ್ಯಾರಿ ಭಾಷಿಕರ ಕುರಿತು "ಮೈಕಾಲ" ಎಂಬ ಕೃತಿಯನ್ನು ರಚನೆ ಮಾಡುವ ಮೂಲಕ ಪ್ರಸಿದ್ಧಿ ಪಡೆದ ದಿ. ಅಹ್ಮದ್ ನೂರಿಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ನಗರದ ಪುರಭವನದ ಅಹ್ಮದ್ ನೂರಿ ವೇದಿಕೆಯಲ್ಲಿ ಶುಕ್ರವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ದೇಶಕ್ಕೆ ಅಪಾರ ಕೊಡುಗೆ ನೀಡಿದ ಮಹನೀಯರ ಬಗ್ಗೆ ಲೇಖಕ, ಲೇಖಕಿಯರು ಬ್ಯಾರಿ ಭಾಷೆಯಲ್ಲಿ ಬರೆದ 10 ಕೃತಿಗಳನ್ನು ಅಕಾಡಮಿಯು ಪ್ರಕಟಿಸಿ ಇಂದು ಬಿಡುಗಡೆಗೊಳಿಸಲಾಗಿದೆ‌. ಮುಂದೆಯೂ ಇನ್ನಷ್ಟು ಒಳ್ಳೆಯ ಕೃತಿಗಳನ್ನು ಪ್ರಕಟಿಸಲಾಗುವುದು‌. ಆ ಮೂಲಕ ಬ್ಯಾರಿ ಭಾಷೆಯ ಸಾಹಿತ್ಯ ವೃದ್ಧಿಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಖತಿ, ಆಂದೋಲನದಲ್ಲಿ ತೊಡಗಿಸಿಕೊಂಡು ಗತಿಸಿದ ಮಹನೀಯರನ್ನು ನೆನಪಿಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವನ್ನು ಮುಂದುವರಿಸಲಾಗುವುದು ಎಂದು ರಹೀಂ ಉಚ್ಚಿಲ್ ನುಡಿದರು‌. ಕಾರ್ಯಕ್ರಮದಲ್ಲಿ ಅಕಾಡಮಿಯ ಮಾಜಿ ಸದಸ್ಯ, ಹಿರಿಯ ಸಾಹಿತಿ ಟಿ.ಎ.ಆಲಿಯಬ್ಬ ಜೋಕಟ್ಟೆಗೆ ದಿ. ಅಹ್ಮದ್ ನೂರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ವಿಚಾರಗೋಷ್ಠಿ: ಅಹ್ಮದ್ ನೂರಿ ಅವರ ಬದುಕು ಮತ್ತು ಬರಹದ ಕುರಿತು ಪತ್ರಕರ್ತ ಹಂಝ ಮಲಾರ್‌ರ ಅಧ್ಯಕ್ಷತೆಯಲ್ಲಿ ನಡೆದ ವಿಚಾರಗೋಷ್ಠಿಯಲ್ಲಿ ಸಾಹಿತಿ ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ಬ್ಯಾರಿ ಅಧ್ಯಯನ ಪೀಠದ ಸದಸ್ಯ ಅಹ್ಮದ್ ಬಾವಾ ಪಡೀಲ್, ಮುಸ್ಲಿಂ ಲೇಖಕರ ಸಂಘದ ಮಾಜಿ ಅಧ್ಯಕ್ಷ ಸಈದ್ ಇಸ್ಮಾಯಿಲ್ ವಿಷಯ ಮಂಡಿಸಿದರು.

ಪತ್ರಕರ್ತ ಎ.ಕೆ. ಕುಕ್ಕಿಲ ಮಹಾತ್ಮಾ ಗಾಂಧೀಜಿ ಕುರಿತು ಬರೆದ "ಜಂಡ್ ಕಂಡ ತುನಿರೊ ಪಕೀರ" ಎಂಬ ಕೃತಿಯನ್ನು ಅಕ್ಷರಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಹಫ್ಸಾ ಬಾನು ಬೆಂಗಳೂರು ಬರೆದ ಡಾ. ಬಿ.ಆರ್. ಅಂಬೇಡ್ಕರ್‌ ಕೃತಿಯನ್ನು ಪತ್ರಕರ್ತ ಪೆರೂರ್ ಜಾರು, ಎಂ. ಅಶೀರುದ್ದೀನ್ ಆಲಿಯಾ ಬರೆದ ಸ್ವಾಮಿ ವಿವೇಕಾನಂದ ಕೃತಿಯನ್ನು ಕೊಂಕಣಿ ಸಾಹಿತ್ಯ ಅಕಾಡಮಿಯ ಸದಸ್ಯ ಗೋಪಾಲಕೃಷ್ಣ ಭಟ್,  ಅಬ್ದುಲ್ ರಝಾಕ್ ಅನಂತಾಡಿ ಬರೆದ ಸರ್ದಾರ್ ವಲ್ಲಭಬಾಯಿ ಪಟೇಲ್ ಕೃತಿಯನ್ನು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ರಹೀನಾ ತೊಕ್ಕೊಟ್ಟು ಬರೆದ ಹವಾಲ್ದಾರ್ ಅಬ್ದುಲ್ ಹಮೀದ್ ಕೃತಿಯನ್ನು ಸಿಆರ್‌ಪಿಎಫ್ ಯೋಧ ಝುಬೈರ್ ಹಳೆನೇರೆಂಕಿಯ ಪತ್ನಿ ಮೆಹರಾಝ್, ಅಬ್ದುಲ್ ರಹ್ಮಾನ್ ಕುತ್ತೆತ್ತೂರು ಬರೆದ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಝುಲೇಖಾ ಮುಮ್ತಾಝ್ ಬರೆದ ಡಾ.ಎಪಿಜೆ ಅಬ್ದುಲ್ ಕಲಾಂ ಕೃತಿಯನ್ನು ಶಾರದಾ ವಿದ್ಯಾಲಯದ ಪ್ರೊ.ಎಂ.ಬಿ. ಪುರಾಣಿಕ್, ಮರಿಯಮ್ ಇಸ್ಮಾಯಿಲ್ ಬರೆದ ವೀರ ರಾಣಿ ಅಬ್ಬಕ್ಕ ಕೃತಿಯನ್ನು ರಂಗಭೂಮಿ ಕಲಾವಿದೆ ಸರೋಜಿನಿ ಶೆಟ್ಟಿ, ಮುಹಮ್ಮದ್ ಅಶ್ರಫ್ ಬಾವಾ ಬರೆದ ಮೌಲಾನಾ ಅಝಾದ್ ಕೃತಿಯನ್ನು ಡಾ. ಎಂಎಸ್‌ಎಂ ಅಬ್ದುಲ್ ರಶೀದ್ ಝೈನಿ ಸಖಾಫಿ ಕಾಮಿಲ್, ಬಶೀರ್ ಅಹ್ಮದ್ ಕಿನ್ಯಾ ಬರೆದ ಅಟಲ್ ನಬಿಹಾರಿ ವಾಜಪೇಯಿ ಕೃತಿಯನ್ನು ಮುಸ್ತಫಾ ತಂಙಳ್ ಕೋಲ್ಪೆ ಬಿಡುಗಡೆಗೊಳಿಸಿದರು.

ಅಕಾಡಮಿಯ ಸದಸ್ಯರಾದ ಕಮರುದ್ದೀನ್ ಸಾಲ್ಮರ, ಶಂಶೀರ್ ಬುಡೋಳಿ, ಸುರೇಖಾ, ಚಂಚಲಾಕ್ಷಿ ಉಪಸ್ಥಿತರಿದ್ದರು.

ಕವಿಗೋಷ್ಠಿ: ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ  ಬಶೀರ್ ಅಹ್ಮದ್ ಕಿನ್ಯ, ಎಂ. ಅಶೀರುದ್ದೀನ್ ಆಲಿಯಾ, ಸಾರಾ ಅಲಿ ಪರ್ಲಡ್ಕ, ರಶೀದಾ ಉಚ್ಚಿಲ್ ಕವನ ವಾಚಿಸಿದರು. ಬಾತಿಷ್ ಪುತ್ತೂರು ಮತ್ತು ಬಳಗದಿಂದ ಬ್ಯಾರಿ ಸಂಗೀತ ಹಾಗೂ ಹುಸೈನ್ ಕಾಟಿಪಳ್ಳ ಮತ್ತು ತಂಡದಿಂದ ಬ್ಯಾರಿ ಕವ್ವಾಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ಮಾಜಿ ಸದಸ್ಯ ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X