ಹೈಕೋರ್ಟ್ ಆದೇಶ ಪಾಲನೆಗೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
![ಹೈಕೋರ್ಟ್ ಆದೇಶ ಪಾಲನೆಗೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಹೈಕೋರ್ಟ್ ಆದೇಶ ಪಾಲನೆಗೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ](https://www.varthabharati.in/sites/default/files/images/articles/2022/02/11/324750-1644601226.jpeg)
ಉಡುಪಿ : ರಾಜ್ಯದ ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣಪೀಠ ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡುವ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಕಮಿಷನರ್ ಅವರಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಪೂರ್ಣಪೀಠ ನೀಡಿರುವ ಆದೇಶವನ್ನು ಪಾಲನೆ ಮಾಡುವಂತೆ ಉಡುಪಿ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ, ಫೆ.12ರ ಶನಿವಾರ ದಂದು ಶಿಕ್ಷಕರ ಮತ್ತು ಪೋಷಕರ ಸಭೆ, ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಹಾಗು ಕಾಲೇಜು ಆಡಳಿತ ಮಂಡಳಿ ಸಭೆಗಳನ್ನು ಕರೆದು, ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.