Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಫೆ.18 ರಿಂದ ಕಾಜೂರು ಉರೂಸ್

ಬೆಳ್ತಂಗಡಿ: ಫೆ.18 ರಿಂದ ಕಾಜೂರು ಉರೂಸ್

ವಾರ್ತಾಭಾರತಿವಾರ್ತಾಭಾರತಿ12 Feb 2022 1:59 PM IST
share
ಬೆಳ್ತಂಗಡಿ: ಫೆ.18 ರಿಂದ ಕಾಜೂರು ಉರೂಸ್

ಬೆಳ್ತಂಗಡಿ : ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮವು ಫೆ.18 ರಿಂದ ಆರಂಭಗೊಂಡು ಫೆ.27 ರವರೆಗೆ ಕಾಜೂರು, ಕಿಲ್ಲೂರು ಜಮಾಅತರು ಜೊತೆ ಸೇರಿ ನಡೆಸಲು ತೀರ್ಮಾನಿದ್ದೇವೆ ಎಂದು ಉರೂಸ್ ಸಮಿತಿ ಅಧ್ಯಕ್ಷ ಕೆ. ಯು ಇಬ್ರಾಹಿಂ ಕಾಜೂರು ತಿಳಿಸಿದ್ದಾರೆ.

ಶನಿವಾರ ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಉರೂಸ್ ಪ್ರಯುಕ್ತ 10 ದಿವಸಗಳಲ್ಲಿ ಪ್ರಖ್ಯಾತ  ವಿದ್ವಾಂಸರಿಂದ ಧಾರ್ಮಿಕ ಪ್ರವಚನಗಳು, ಸಾಮೂಹಿಕ ಸರಳ ವಿವಾಹ ಸಮಾರಂಭ, ಸಾರ್ವಜನಿಕ ಬೃಹತ್ ಆರೋಗ್ಯ ಮೇಳ, ಜನಪ್ರತಿನಿಧಿ ಸಂಗಮ, ಬೃಹತ್ ದಿಕ್ರ್ ಮತ್ತು ಬುರ್ದಾ ಮಜ್ಲಿಸ್, ಮುತ‌ಅಲ್ಲಿಮರ ಸಂಗಮ, ಸರ್ವಧರ್ಮೀಯರ  ಸಂಗಮ ಹಾಗೂ ಮಹಾ ಅನ್ನದಾನ ನಡೆದಿದೆ ಎಂದರು.

ಕಾಜೂರು ದರ್ಗಾ ಶರೀಫ್ ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್, ಸಯ್ಯಿದ್ ಕಾಜೂರು ತಂಙಳ್ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು.

ಫೆ.18ರಂದು ಕಿಲ್ಲೂರು ಜಮಾಅತ್ ನಿಂದ ಸಂದಲ್ ಮೆರವಣಿಗೆ ಆಗಮಿಸಿ, ಧ್ವಜಾರೋಹಣವನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ನೆರವೇರಿಸಲಿದ್ದಾರೆ‌. ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ಉದ್ಘಾಟನೆ ನಡೆಸಲಿದ್ದಾರೆ.

ಫೆ.19 ರಂದು ಸಂಜೆ 7ಕ್ಕೆ ರಿಫಾಯಿಯ್ಯ ದಪ್ಫ್ ಸಮಿತಿ ಕಾಜೂರು ಸಹಭಾಗಿತ್ವದಲ್ಲಿ ಸಾಮೂಹಿಕ ಸರಳ ವಿವಾಹ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ವಿಶ್ವ ವಿಖ್ಯಾತ ಧಾರ್ಮಿಕ ಪಂಡಿತ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಗವಹಿಸಲಿದ್ದಾರೆ. ‌ಯೆನೆಪೋಯ ವಿವಿ ಕುಲಾದಿಪತಿ ವೈ. ಅಬ್ದುಲ್ಲಕುಂಞಿ ಉದ್ಘಾಟನೆ ನೆರವೇರಿಸಲಿದ್ದಾರೆ‌. ಎಸ್‌ವೈಎಸ್ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಶೀದ್ ಝೈನಿ ಸಖಾಫಿ ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ. ಕಾಜೂರು ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯ ಸಯ್ಯಿದ್ ಕಾಜೂರು ತಂಙಳ್, ತಾ.ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್, ಕರ್ನಾಟಕ ಮುಸ್ಲಿಂ ಜಮಾಅತ್ ತಾ. ಅಧ್ಯಕ್ಷ ಎಸ್.ಎಂ ತಂಙಳ್, ಗಂಜಿಮಠ ತಂಙಳ್, ಮುಮ್ತಾಝ್ ಅಲಿ ಕೃಷ್ಣಾಪುರ ಸಹಿತ ಗಣ್ಯರು ಭಾಗವಹಿಸಲಿದ್ದಾರೆ. ಅಂದು ವಿವಾಹವಾಗಲಿರುವ ವಧುವಿಗೆ 5 ಪವನ್ ಚಿನ್ನ, ವಸ್ತ್ರ ಮತ್ತು ಸೇರುವ ಅವರ ಬಂಧುಗಳಿಗೆ 5 ಸಾವಿರ ಮಂದಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಅದೇ ದಿನ ರಾಜ್ಯಮಟ್ಟದ ಇಸ್ಲಾಮಿಕ್ ಸಾಂಸ್ಕೃತಿಕ ದಫ್ಫ್ ಸ್ಪರ್ಧೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಫೆ.24 ರಂದು ರಾತ್ರಿ ಬೃಹತ್ ದಿಕ್ರ್ ಮತ್ತು ಬುರ್ದಾ ಮಜ್ಲಿಸ್ ನಡೆಯಲಿದ್ದು ನೇತೃತ್ವವನ್ನು ಸಯ್ಯಿದ್ ಬಾಯಾರ್ ತಂಙಳ್ ವಹಿಸಲಿದ್ದಾರೆ. ‌ಕಾಜೂರು ತಂಙಳ್ ಉದ್ಘಾಟಿಸಲಿದ್ದು, ತೋಕೆ ಮುಹ್ಯುದ್ದೀನ್ ಕಾಮಿಲ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.

ಫೆ.26 ರಂದು ಬೆಳಿಗ್ಗೆ ಯೆನಪೋಯ  ವೈದ್ಯಕೀಯ ಕಾಲೇಜಿನ ವಿವಿಧ ವಿಭಾಗಗಳ ತಜ್ಞ ವೈದ್ಯರ ಉಪಸ್ಥಿತಿಯಲ್ಲಿ 1 ಸಾವಿರ ಮಂದಿಯ ಬೃಹತ್ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷಧ ವಿತರಣೆ ನಡೆಯಲಿದೆ. ಶಾಸಕ ಹರೀಶ್ ಪೂಂಜ ಆರೋಗ್ಯ ಮೇಳವನ್ನು ಉದ್ಘಾಟಿಸಲಿದ್ದಾರೆ.

ಅಪರಾಹ್ನ 4ಕ್ಕೆ ಜನಪ್ರತಿನಿಧಿ ಸಂಗಮ ನಡೆಯಲಿದ್ದು ಕಾಜೂರು ಆಸುಪಾಸಿನ ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಮತ್ತು ಇಂದಬೆಟ್ಟು ಗ್ರಾ.ಪಂ ಮಟ್ಟದ ಜನಪ್ರತಿನಿಧಿಗಳು, ಸಹಕಾರಿ ಮತ್ತು ಧಾರ್ಮಿಕ ಸಂಸ್ಥೆಗಳ ಮುಖಂಡರ ಸಮಾವೇಶ ನಡೆಯಲಿದೆ.

ಫೆ. 27 ರಂದು ಸಂಜೆ  ಸರ್ವಧರ್ಮೀಯರ ಸೌಹಾರ್ದ ಸಂಗಮ‌ ನಡೆಯಲಿದ್ದು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಬಿ‌.ಎಂ ಫಾರೂಕ್ ನಡೆಸಲಿದ್ದಾರೆ.

ಮುಖ್ಯ ಪ್ರಭಾಷಣವನ್ನು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರು ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರ. ಕಾರ್ಯದರ್ಶಿ ಮೌಲಾನಾ ಎನ್.ಕೆ.ಎಂ ಶಾಫಿ ಸ‌ಅದಿ ಬೆಂಗಳೂರು ನಡೆಸಲಿದ್ದಾರೆ‌. ಸಯ್ಯಿದ್ ಕಾಜೂರು ತಂಙಳ್, ಅಝೀಝ್ ದಾರಿಮಿ ಚೊಕ್ಕಬೆಟ್ಟು ಮತ್ತು ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ.ಫಾ. ಜೋಸೆಫ್ ವಲಿಯಪರಂಬಿಲ್ ಸಂದೇಶ ನೀಡಲಿದ್ದಾರೆ.

ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, ಉಪನಾಯಕ ಯು‌.ಟಿ ಖಾದರ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್,  ಮಾಜಿ‌ ಸಚಿವರಾದ ಝಮೀರ್ ಅಹಮ್ಮದ್, ಬಿ. ರಮಾನಾಥ ರೈ ಹಾಗೂ ಕೆ ಗಂಗಾಧರ ಗೌಡ, ಮಾಜಿ‌ ಮುಖ್ಯ ಸಚೇತಕ ವಸಂತ ಬಂಗೇರ, ರಾಜ್ಯ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಹುಸೇನ್ ಪಠಾಣ್, ರಾಜ್ಯ ವಕ್ಫ್ ಮಂಡಳಿ ಸದಸ್ಯರಾದ ಅಡ್ವಕೇಟ್ ರಿಯಾಝ್ ಖಾನ್ ಮತ್ತು ಯಾಕೂಬ್ ಯೂಸುಫ್ ಹೊಸನಗರ, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ. ಶೇಖ್ ಬಾವಾ ಹಾಜಿ ಸಹಿತ ಪ್ರಮುಖ ಗಣ್ಯರುಗಳು ಭಾಗವಹಿಸಲಿದ್ದಾರೆ.

ಅಂದೇ ರಾತ್ರಿ ಸಯ್ಯಿದ್ ಕುಂಬೋಳ್ ತಂಙಳ್ ನೇತೃತ್ವದಲ್ಲಿ ಉರೂಸ್ ಸಮಾರೋಪ ನಡೆಯಲಿದ್ದು, ಸಯ್ಯಿದ್ ಕಾಜೂರು ತಂಙಳ್, ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾಧ್ಯಕ್ಷ ಸಯ್ಯಿದ್ ಶಿಹಾಬುದ್ದೀನ್ ಹೈದ್ರೋಸಿ ತಂಙಳ್,  ಡಾ‌.ಕಾವಳಕಟ್ಟೆ ಹಝ್ರತ್, ಮೋನು ಹಾಜಿ ಕಣಚ್ಚೂರು, ರಫೀಕ್ ಸ‌ಅದಿ ಕಿಲ್ಲೂರು ಮೊದಲಾದವರು ಉಪಸ್ಥಿತರಿರಲಿದ್ದಾರೆ.

ಧಾರ್ಮಿಕ ಪ್ರವಚನದ ಭಾಗವಾಗಿ ಫೆ‌.17 ರಂದು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ‌ ಶೈಖುನಾ ಮಾಣಿ ಉಸ್ತಾದ್, ಫೆ.22 ರಂದು ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ ನೇತೃತ್ವದಲ್ಲಿ ಇಬ್ರಾಹಿಂ ಖಲೀಲ್ ಹುದವಿ ಕಾಸರಗೋಡು, ಫೆ‌.26 ರಂದು ಅಂತಾರಾಷ್ಟ್ರೀಯ ಖ್ಯಾತಿಯ ವಾಗ್ಮಿ ಕುಮ್ಮನಂ ನಿಝಾಮುದ್ದೀನ್ ಅಝ್ಹರಿ ಅಲ್ ಖಾಸಿಮಿ ಕೊಲ್ಲಂ ಕೇರಳ ಇವರಿಂದ ಪ್ರಭಾಷಣಗಳು ನಡೆಯಲಿದೆ. ಉರೂಸಿನ ಎಲ್ಲಾ ದಿನಗಳಲ್ಲೂ ಮಧ್ಯಾಹ್ನ ಅನ್ನದಾನ ನಡೆಯಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೆ.ಎಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು, ಉರೂಸ್ ಸಮಿತಿ ಕೋಶಾಧಿಕಾರಿ ಕೆ.ಎಮ್ ಮುಹಮ್ಮದ್ ಕಮಾಲ್ ಕಾಜೂರು, ಉರೂಸ್ ಸಮಿತಿ ಉಪಾಧ್ಯಕ್ಷ ಹಾಜಿ ಬಿ.ಎಚ್ ಅಬೂಬಕ್ಕರ್ ಕಿಲ್ಲೂರು, ಜೊತೆ ಕಾರ್ಯದರ್ಶಿ ಅಶ್ರಫ್ ತಿಮ್ಮನಬೆಟ್ಟು ಕಿಲ್ಲೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X