ಪುತ್ತೂರು; ರಿಕ್ಷಾ ಢಿಕ್ಕಿ: ಸೈಕಲ್ ಸವಾರ ಮೃತ್ಯು

ಪುತ್ತೂರು: ಸೈಕಲ್ ಮತ್ತು ರಿಕ್ಷಾ ನಡುವೆ ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆಯಲ್ಲಿ ಶನಿವಾರ ನಡೆದಿದೆ.
ಕೆಮ್ಮಿಂಜೆ ನಿವಾಸಿ ಚಿದಾನಂದ (47) ಮೃತರು ಎಂದು ಗುರುತಿಸಲಾಗಿದೆ.
ಅವರು ತನ್ನ ಸೈಕಲ್‍ನಲ್ಲಿ ಕೆಮ್ಮಿಂಜೆ ದೇವಸ್ಥಾನದ ಸಮೀಪ ಹೋಗುತ್ತಿದ್ದ ವೇಳೆ ಸೈಕಲ್ ಮತ್ತು ಮುಂಭಾಗದಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ಅವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story