ಕರಾವಳಿಯಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಯತ್ನ ನಡೆಯುತ್ತಿದೆ: ಎಚ್.ಡಿ.ದೇವೇಗೌಡ

ಮಂಗಳೂರು: ಕರಾವಳಿಯಲ್ಲಿ ಶಾಂತಿ ಕದಡಿ ರಾಜಕೀಯ ಲಾಭ ಪಡೆಯುವ ಯತ್ನ ನಡೆಯುತ್ತಿದೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಅವರು ದ.ಕ. ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಂದು ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಬಿಜೆಪಿ ಕೇಂದ್ರ ಮತ್ತು ರಾಜ್ಯ ದಲ್ಲಿ ಆಡಳಿತ ನಡೆಸುತ್ತಿದೆ. ಆದರೆ ಭವಿಷ್ಯದಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲು ಸಾಧ್ಯವಿಲ್ಲ. ಪಂಚ ರಾಜ್ಯ ಚುನಾವಣೆಯಲ್ಲಿಯೂ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯ ಹೊಂದಿರುವುದು ಸ್ಪಷ್ಟವಾಗಿದೆ. ಕರಾವಳಿಯಲ್ಲಿ ಒಂದಲ್ಲ ಒಂದು ಸಮಸ್ಯೆ ಸೃಷ್ಟಿ ಮಾಡುವ ಶಕ್ತಿಗಳು ಬಹಳ ಹಿಂದಿನಿಂದಲೂ ಇರುವುದನ್ನು ಗಮನಿಸಿದ್ದೇನೆ. ಈ ಶಕ್ತಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶ ಹೊಂದಿದೆ. ನಾನು ಧರ್ಮದ ಹೆಸರಿನಲ್ಲಿ ವೈಷಮ್ಯ ಸೃಷ್ಟಿ ಮಾಡಿ ರಾಜಕೀಯ ಲಾಭ ಪಡೆದಿಲ್ಲ ಎಂದು ದೇವೇಗೌಡ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಜೆ.ಡಿಎಸ್ ದ.ಕ.ಜಿ ಲ್ಲಾಧ್ಯಕ್ಷ ಜಾ.ಕೆ.ಮಾಧವ ಗೌಡ, ಜೆಡಿಎಸ್ ಮುಖಂಡರಾದ ಸುಶೀಲ್ ನರೋನ್ಹಾ, ಮುಹಮ್ಮದ್ ಕುಂಞಿ, ಎಂ.ಬಿ. ಸದಾಶಿವ, ವಸಂತ ಪೂಜಾರಿ, ಆಸಿಫ್, ಎನ್.ಪಿ, ಪುಷ್ಪರಾಜನ್ ಅಕ್ಷಿತ್ ಸುವರ್ಣ, ಧನರಾಜ್, ಮೊದಲಾದವರು ಉಪಸ್ಥಿತರಿದ್ದರು.