ದ.ಕ. ಜಿಲ್ಲೆ: ಕೋವಿಡ್ ಗೆ 4 ಬಲಿ, 62 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಫೆ.12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 62 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 188 ಮಂದಿ ಇಂದು ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,34,904 ಸೋಂಕಿಗೆ ಒಳಪಟ್ಟು, 132, 241 ಮಂದಿ ಸೋಂಕು ಮುಕ್ತರಾಗಿದ್ದಾರೆ.
ಇಂದು 4 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,823 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ. ದಕ್ಷಿಣ ಕನ್ನಡದಲ್ಲಿ 840 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.08ಆಗಿದೆ.
Next Story





