Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರವಿ ಕಕ್ಕೆಪದವುಗೆ ಮಂಗಳೂರು ಪ್ರೆಸ್...

ರವಿ ಕಕ್ಕೆಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ12 Feb 2022 8:55 PM IST
share
ರವಿ ಕಕ್ಕೆಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಮಂಗಳೂರು, ಫೆ.12: ನಗರದ ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರು ಪ್ರೆಸ್ ಕ್ಲಬ್- 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟು ಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿ ಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭು ನೇತೃತ್ವದ ನಿರ್ಣಾಯಕ ಸಮಿತಿ ಈ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ

ಮಾ.6ರಂದು ತಣ್ಣೀಬಾವಿಯ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದು ರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಕೆಪದವು ಪರಿಚಯ

ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿ- ಕಮಲ ದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಕೆಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆ ಸೇರಿಸಲಾಗಿತ್ತು. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದು, ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಶಾಲೆಗೆ ಸೇರಿದ ಕೇವಲ 15 ದಿನಗಳ ಶಾಲೆಯ ಬಳಿಕ ಶಿಕ್ಷಣದಿಂದ ವಂಚಿತರಾದರು. ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾ ವಿತರಕರಾಗಿ, ಅಂಗಡಿಯಲ್ಲಿ ಸಹಾಯಕರಾಗಿ, ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿ, ಮೇಸ್ತ್ರಿಗೆ ಹೆಲ್ಪರ್ ಆಗಿ, ಹೋಟೆಲ್‌ನಲ್ಲಿ ಸಹಾಯಕರಾಗಿ, ಅರ್ಚಕರ ಸಹಾಯಕನಾಗಿಯೂ ಅವರು ಕೆಲಸ ಮಾಡಿದ್ದರು.

2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರರಾದರು. ಬಳಿಕ ಸ್ವಂತ ಅನುಗ್ರಹ ಕನ್‌ಸ್ಟಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟ್ರೀಸ್, ಯಶಸ್ವಿ ಮತ್ತು ಬೇಡಿಕೆಯ ಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಿದ ಹಿರಿಮೆ ಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ. ಸಮಾಜ ಸೇವೆಯು ರವಿ ಕಕ್ಕೆಪದವು ಅವರ ಇಷ್ಟದ ಪ್ರವೃತ್ತಿ. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನು ಸಮಾಜ ಸೇವಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡುತ್ತಿದ್ದಾರೆ. ಕುಲ್ಕುಂದ ಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿ ಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನ ಮಾಡುತ್ತಿದ್ದಾರೆ. ಸಮಾಜ ಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು ‘ಬೆಂಕಿಯಲ್ಲಿ ಅರಳಿದ ಹೂವು’ ಎಂಬ ಪುಸ್ತಕವನ್ನೂ ಬರೆದಿದ್ದಾರೆ. ರವಿ ಕಕ್ಕೆಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಸೇರಿ 270ಕ್ಕೂ ಅಧಿಕ ಸನ್ಮಾನಗಳು ಲಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X