Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುಪ್ರೀಂ ಆದೇಶದಿಂದ ಹಿಂದುಳಿದ ಜಾತಿಗಳಿಗೆ...

ಸುಪ್ರೀಂ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಲು ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಒತ್ತಾಯ

ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಜಾರಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Feb 2022 12:27 PM IST
share
ಸುಪ್ರೀಂ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯ ತಪ್ಪಿಸಲು ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಫೆ.13: ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲ ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಸರಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದಿರುವ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ಸರಕಾರ ಕಾಲವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದು ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

2010ರಲ್ಲೇ ಸುಪ್ರೀಂ ಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು. ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು..

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X