Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಡೇಚೂರು ಕೈಗಾರಿಕಾ ಪ್ರದೇಶ 7 ಸಾವಿರ...

ಕಡೇಚೂರು ಕೈಗಾರಿಕಾ ಪ್ರದೇಶ 7 ಸಾವಿರ ಎಕರೆಗೆ ವಿಸ್ತರಣೆ: ಸಚಿವ ಡಾ.ಅಶ್ವತ್ಥನಾರಾಯಣ

ಯಾದಗಿರಿ ಜಿಟಿಟಿಸಿ ನೂತನ ತರಬೇತಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Feb 2022 1:25 PM IST
share
ಕಡೇಚೂರು ಕೈಗಾರಿಕಾ ಪ್ರದೇಶ 7 ಸಾವಿರ ಎಕರೆಗೆ ವಿಸ್ತರಣೆ: ಸಚಿವ ಡಾ.ಅಶ್ವತ್ಥನಾರಾಯಣ

ಯಾದಗಿರಿ, ಫೆ.13: ಜಿಲ್ಲೆಯ ಕಡೇಚೂರಿನಲ್ಲಿರುವ 3,500 ಎಕರೆ ಕೈಗಾರಿಕಾ ಪ್ರದೇಶವನ್ನು 7 ಸಾವಿರ ಎಕರೆಗೆ ವಿಸ್ತರಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಸಾಧ್ಯವಾಗುವಂತೆ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲಾಗುವುದು. ಕೈಗಾರಿಕಾ ಪ್ರದೇಶ ವಿಸ್ತರಣೆಗಾಗಿ ಕೇಂದ್ರ ಸರಕಾರದಿಂದಲೂ 1,000 ಕೋಟಿ ರೂ. ನೆರವು ಸಿಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಇರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ನಿರ್ಮಿಸಿರುವ ನೂತನ ತರಬೇತಿ ಕೇಂದ್ರ ಸಂಕೀರ್ಣವನ್ನು ಅವರು ರವಿವಾರ ಉದ್ಘಾಟಿಸಿ ಮಾತನಾಡುತ್ತಿದ್ದರು.

ತರಬೇತಿ ಕ್ಯಾಂಪಸ್, ಕಾರ್ಯಾಗಾರ ಮತ್ತು ವಿದ್ಯಾರ್ಥಿ ನಿಲಯಗಳಿರುವ ಈ ಕೇಂದ್ರವನ್ನು 17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿಮಾನ ತಯಾರಿಕೆಯಲ್ಲಿ ಹೆಸರು ಮಾಡಿರುವ ಡಸಾಲ್ಟ್ ಕಂಪೆನಿ ಇಲ್ಲಿ ತನ್ನ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಿದ್ದು, ಇಲ್ಲಿ ವರ್ಷಕ್ಕೆ 120 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇದೆ. ಈ ಕೇಂದ್ರದ ಮೂಲಕ ಸ್ಥಳೀಯ ಉದ್ದಿಮೆಗಳಿಗೆ ಕೌಶಲ್ಯಪೂರ್ಣ ಉದ್ಯೋಗಿಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಜಾಗತಿಕ ಸ್ಪರ್ಧೆಯನ್ನು ಎದುರಿಸಲು ಸಮರ್ಥರಾಗುವಂತೆ ಈ ಕೇಂದ್ರದಲ್ಲಿ ಇಲೆಕ್ಟ್ರಿಕಲ್ ಇನ್ಸ್ಟಾಲೇಶನ್, ಐಒಟಿ, ಮತ್ತು ಇಂಗ್ಲಿಷ್ ಭಾಷಾ ಕಲಿಕೆಯ ಅತ್ಯುತ್ತಮ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಇಂಗ್ಲಿಷ್ ಲ್ಯಾಬಿನಲ್ಲಿ ವರ್ಷಕ್ಕೆ 200 ವಿದ್ಯಾರ್ಥಿಗಳಿಗೆ ತರಬೇತಿ ಕೊಡಲಾಗುವುದು ಎಂದು ಅವರು ವಿವರಿಸಿದರು.

ಈ ನೂತನ ಕೇಂದ್ರದಲ್ಲಿ ಟೂಲ್ ಮತ್ತು ಡೈ ಮೇಕಿಂಗ್ ಹಾಗೂ ಮೆಕ್ಯಾಟ್ರಾನಿಕ್ಸ್ ನಲ್ಲಿ 4 ವರ್ಷಗಳ ದೀರ್ಘಾವಧಿ ಕೋರ್ಸುಗಳನ್ನು ಆರಂಭಿಸಲಾಗುತ್ತಿದೆ. ಇದರ ಜೊತೆಗೆ, ಫಿಟ್ಟರ್, ಟರ್ನರ್, ಮಿಲ್ಲರ್, ಗ್ರೈಂಡರ್, ಸಾಲಿಡ್ ವರ್ಕ್ಸ್, ಯೂನಿಗ್ರಾಫಿಕ್ಸ್, ಆಟೋಕ್ಯಾಡ್, ಮಾಸ್ಟರ್ ಕ್ಯಾಮ್, ಕ್ಯಾಡ್ ಕ್ಯಾಮ್ ಮುಂತಾದ ಅಲ್ಪಾವಧಿ ಕೋರ್ಸುಗಳೂ ಇದ್ದು, ಇವುಗಳಲ್ಲಿ ವರ್ಷಕ್ಕೆ 400 ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕೊಡಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ದೀರ್ಘಾವಧಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳಿಗೆ ಕೊನೆಯ ವರ್ಷದಲ್ಲಿ ಕೈಗಾರಿಕೆ ತರಬೇತಿಯನ್ನು ಕಡ್ಡಾಯಗೊಳಿಸಲಾಗಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಗರಿಷ್ಠ 15 ಸಾವಿರ ತರಬೇತಿ ಭತ್ತೆಯನ್ನೂ ಕೊಡಲಾಗುವುದು. ಒಟ್ಟಿನಲ್ಲಿ, ಯಾದಗಿರಿ ಜಿಲ್ಲೆಯಲ್ಲಿ ಗುಣಮಟ್ಟದ ಉದ್ಯಮಶೀಲ ಸಂಸ್ಕೃತಿಯನ್ನು ರೂಪಿಸಲಾಗುವುದು ಎಂದು ಸಚಿವರು ನುಡಿದರು.

ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು, ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ಆರ್ ತಳವಾರ, ಜಿಲ್ಲಾಧಿಕಾರಿ ಡಾ.ರಾಗಪ್ರಿಯ, ಕಾಲೇಜು ಶಿಕ್ಷಣ ಆಯುಕ್ತ ಪಿ.ಪ್ರದೀಪ, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X