ಉಳ್ಳಾಲ: ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಉಳ್ಳಾಲ: ನಾಪತ್ತೆಯಾದ ವ್ಯಕ್ತಿಯ ಮೃತದೇಹ ಸೋಮೇಶ್ವರ ಸಮುದ್ರತೀರದಲ್ಲಿ ರವಿವಾರ ಸಂಜೆ ವೇಳೆ ಪತ್ತೆಯಾಗಿದೆ. ಉಚ್ಚಿಲ ನಿವಾಸಿ ಭಾಸ್ಕರ್ ನಾಯಕ್ (32) ಮೃತರು.
ಅವರು ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಡುಕಾಟ ನಡೆಸಿದ್ದರು. ರವಿವಾರ ಸಂಜೆ ವೇಳೆ ಸೋಮೇಶ್ವರ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಮಾಹಿತಿ ಪಡೆದ ಮನೆ ಮಂದಿ ಘಟನಾ ಸ್ಥಳಕ್ಕೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಂಗಳೂರು ಸಹಾಯಕ ಆಯುಕ್ತರ ವಿರುದ್ಧ ಸಚಿವರಿಗೆ ದೂರು
Next Story