ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭಯ: ಧ್ರುವನಾರಾಯಣ್

ಚಾಮರಾಜನಗರ : 'ಮೀಸಲಾತಿ ವಿಚಾರದ ಕಾರಣಕ್ಕೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವುದು ಅನುಮಾನ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿಗೆ ಸೋಲುವ ಭಯ ಇದೆ, ಅದಕ್ಕಾಗಿಯೇ ಚುನಾವಣೆ ನಡೆಸುತ್ತಿಲ್ಲ' ಎಂದು ಮಾಜಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಹೇಳಿದ್ದಾರೆ.
ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೂ ಮೀಸಲಾತಿ ನಿಗದಿ ಪಡಿಸಿ ಬೇಗ ಚುನಾವಣೆ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಚುನಾವಣೆ ಮುಂದೂಡುವುದು ಸರಿಯಲ್ಲ ಎಂದರು.
ನಂಜನಗೂಡು ಶಾಸಕ ಹರ್ಷವರ್ಧನ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆಯೇ ಎಂದು ಕೇಳಿದ್ದಕ್ಕೆ, ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಇದು ಮಾಧ್ಯಮ ವದಂತಿ ಅಷ್ಟೇ ಎಂದು ಧ್ರುವನಾರಾಯಣ ಅವರು ಹೇಳಿದರು.
Next Story