ದ.ಕ.ಜಿಲ್ಲೆ ಜಿಲ್ಲೆಯಲ್ಲಿ ರವಿವಾರ 92 ಮಂದಿಗೆ ಕೋವಿಡ್ ದೃಢ, 3 ಮಂದಿ ಬಲಿ

ಸಾಂದರ್ಭಿಕ ಚಿತ್ರ
ಮಂಗಳೂರು, ಫೆ.13:ದ.ಕ. ಜಿಲ್ಲೆಯಲ್ಲಿ ರವಿವಾರ ಕೋವಿಡ್ಗೆ 3 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,826ಕ್ಕೇರಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.1.61 ದಾಖಲಾಗಿದೆ.
ರವಿವಾರ 92 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅಲ್ಲದೆ 117 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1,34,996 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,32,358 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 812 ಸಕ್ರಿಯ ಪ್ರಕರಣವಿದೆ.
ರವಿವಾರ ಮೃತಪಟ್ಟ 3 ಮಂದಿಯ ಪೈಕಿ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಸೇರಿದ್ದಾರೆ. ಅಲ್ಲದೆ ಮೃತಪಟ್ಟವರಲ್ಲಿ ಒಬ್ಬ ಪುರುಷ ಮತ್ತು ಇಬ್ಬರು ಮಹಿಳೆಯರಿದ್ದಾರೆ.
Next Story





