ಉದ್ಯೋಗ ಅರಸಿ ರಾಜಸ್ಥಾನಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂದರ್ಭಿಕ ಚಿತ್ರ
ಚುರು,ಫೆ.13: ರಾಜಸ್ಥಾನದ ಚುರು ಪಟ್ಟಣದಲ್ಲಿ ಕೆಲಸವನ್ನು ಕೊಡಿಸುವುದಾಗಿ 25 ಹರೆಯದ ಯುವತಿಯನ್ನು ಕರೆಸಿಕೊಂಡಿದ್ದ ನಾಲ್ವರು ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವನ್ನು ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ಅಧಿಕಾರಿ ಮಮತಾ ಸಾರಸ್ವತ ಅವರು,ಕೆಲಸವನ್ನು ಕೊಡಿಸುವ ನೆಪದಲ್ಲಿ ನಾಲ್ವರು ಯುವಕರು ಸಂತ್ರಸ್ತೆಯನ್ನು ಹೋಟೆಲ್ವೊಂದಕ್ಕೆ ಕರೆಸಿಕೊಂಡಿದ್ದರು ಮತ್ತು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರು. ನಂತರ ಸಂತ್ರಸ್ತೆಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿದ್ದ ಪಾನಮತ್ತರಾಗಿದ್ದ ದುಷ್ಕರ್ಮಿಗಳು ಆಕೆಯನ್ನು ತಾರಸಿಯಿಂದ ಕೆಳಕ್ಕೆ ತಳ್ಳಿದ್ದರು. ಆದರೆ ಹಗ್ಗವು ಕಂಬವೊಂದಕ್ಕೆ ಸಿಕ್ಕಿಕೊಂಡಿದ್ದರಿಂದ ಸಂತ್ರಸ್ತೆ ಬದುಕುಳಿದಿದ್ದಾಳೆ. ಈ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದರು.
Next Story





