ದ.ಕ.ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ಗೆ ಶಾಸಕ ಹಾರಿಸ್ ಭೇಟಿ

ಮಂಗಳೂರು,ಫೆ.13:ನಗರದ ನೆಹರೂ ಮೈದಾನದ ಫುಟ್ಬಾಲ್ ಗ್ರೌಂಡ್ಗೆ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ, ಶಾಸಕ ಎನ್.ಎ. ಹಾರಿಸ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ದ.ಕ.ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ನ ಆಶ್ರಯದಲ್ಲಿ ನಡೆಯುತ್ತಿರುವ ಲೀಗ್ ಪಂದ್ಯಾವಳಿಯನ್ನು ವೀಕ್ಷಿಸಿದ ಅವರು ಅಸೋಸಿಯೇಶನ್ನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ರಾಜ್ಯ, ರಾಷ್ಟ್ರೀಯ ಮಟ್ಟದ ಆಟಗಾರರನ್ನು ತಯಾರು ಮಾಡಲು ಹೆಚ್ಚಿನ ಮುತುವರ್ಜಿ ವಹಿಸಲು ಸೂಚಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ನ ಅಧ್ಯಕ್ಷ ಡಿ.ಎಂ.ಅಸ್ಲಂ, ರಾಜ್ಯ ಸಮಿತಿಯ ಸದಸ್ಯ ವಿಜಯ ಸುವರ್ಣ, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಹುಸೇನ್ ಬೋಳಾರ, ಖಜಾಂಚಿ ಅನಿಲ್ ಪಿ.ವಿ, ರಾಜ್ಯ ಸಮಿತಿಯ ಕೋಚ್ ಥಾಮಸ್, ಫಯಾಝ್, ಖಾಲಿದ್, ಫಿರೋಝ್, ಹರಿಶ್ಚಂದ್ರ ಬೆಂಗರೆ, ಆರಿಫ್ ಉಚ್ಚಿಲ, ಅಬ್ದುಲ್ ಸಲಾಂ ಉಪಸ್ಥಿತರಿದ್ದರು.
Next Story