ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಮೃತ್ಯು

ಹೊಸದಿಲ್ಲಿ: ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ನಿಶಾನ್ ಸಾಹಿಬ್ ಧ್ವಜವನ್ನು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದ ನಟ ಹಾಗೂ ರೈತ ಕಾರ್ಯಕರ್ತ ದೀಪ್ ಸಿಧು ದಿಲ್ಲಿ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ದೆಹಲಿ ಸಮೀಪದ ಕುಂಡ್ಲಿ-ಮನೆಸರ್-ಪಲ್ವಾಲ್ ಎಕ್ಸ್‌ಪ್ರೆಸ್ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಎಂದು NDTV ವರದಿ ಮಾಡಿದೆ.
ಸಿಧು ದೆಹಲಿಯಿಂದ ಪಂಜಾಬ್‌ನ ಭಟಿಂಡಾಗೆ ಹೋಗುತ್ತಿದ್ದಾಗ ಆತ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ 9:30 ಕ್ಕೆ ಟ್ರಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ಮೃತಪಟ್ಟಿರುವುದನ್ನು ಆಸ್ಪತ್ರೆ ಮೂಲಗಳು ಧೃಡಪಡಿಸಿದೆ.
Next Story





