ಮಂಗಳೂರು: ಗಾಂಜಾ ಮಾರಾಟ; ಮೂವರು ಆರೋಪಿಗಳ ಬಂಧನ

ಮಂಗಳೂರು, ಫೆ.15 ದೇರಳಕಟ್ಟೆ ಸಮೀಪದ ಮಂಜನಾಡಿ ಗ್ರಾಮದ ನಾಟೇಕಲ್ ವಿಜಯನಗರ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಹನೀಫ್(28), ಹಬೀಬ್ (30), ಮುಹಮ್ಮದ್ ನಸೀಬ್(19) ಬಂಧಿತ ಆರೋಪಿಗಳು. ಇವರಿಂದ 1,310 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.
ಸ್ವಾಧೀನಪಡಿಸಿಕೊಳ್ಳಲಾದ ಸೊತ್ತುಗಳ ಒಟ್ಟು ಮೌಲ್ಯ 38,100 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





