Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ...

ಮಂಡ್ಯ: ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ ನಿಧನ

ವಾರ್ತಾಭಾರತಿವಾರ್ತಾಭಾರತಿ16 Feb 2022 9:25 AM IST
share
ಮಂಡ್ಯ: ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ ನಿಧನ

ಮಂಡ್ಯ, ಫೆ.16: ಕೆರಗೋಡು ಮಾಜಿ ಶಾಸಕ ಡಾ.ಎಚ್‌.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

 ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕರಾಗಿ, ಒಮ್ಮೆ ವಿಧಾನ ಪರಿಷತ್‌ ಸದಸ್ಯ ಹಾಗೂ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರೂ ಆಗಿದ್ದ ಕೆರಗೋಡು ತಾಲೂಕಿನ ಹೊಳಲು ಗ್ರಾಮದ ಡಾ.ಎಚ್‌.ಡಿ.ಚೌಡಯ್ಯ  ಸಹಕಾರ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ.

1960ರಿಂದ 1968ರವರೆಗೆ ತಾಲೂಕು ಬೋರ್ಡ್‌ ಅಧ್ಯಕ್ಷರಾಗಿ ಬಳಿಕ ಜಿಲ್ಲಾ ಸಹಕಾರ ಬ್ಯಾಂಕ್‌ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. 1978ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಜನತಾ ಪಕ್ಷದಿಂದ ಆಯ್ಕೆಯಾಗಿದ್ದರು. 1983ರ ಚುನಾವಣೆಯಲ್ಲಿ ತಮ್ಮ ರಾಜಕೀಯ ಗುರು ಕೆ.ವಿ.ಶಂಕರಗೌಡ ವಿರುದ್ಧವೇ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1985ರಲ್ಲೂ ಕಾಂಗ್ರೆಸ್‌ನಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1991 ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಕೆರಗೋಡು ಕ್ಷೇತ್ರ ಮಂಡ್ಯ ಕ್ಷೇತ್ರದೊಂದಿಗೆ ವಿಲೀನವಾಯಿತು.  

ಹೊಳಲು ಗ್ರಾಮದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ, ಬುಧವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸಂತಾಪ: ಚೌಡಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯರ ನಿಧನ ಅತೀವ ದುಃಖದ ಸಂಗತಿ. 94 ವರ್ಷದ ಹಿರಿಯರಾಗಿದ್ದ ಮಾಜಿ ಶಾಸಕರು ಹಾಗೂ ಜನಮುಖಿ ಮುತ್ಸದ್ದಿ ರಾಜಕಾರಣಿ ಆಗಿದ್ದ ಚೌಡಯ್ಯರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು. ಪತ್ನಿಯವರ ಅಗಲಿಕೆ ಬಳಿಕ ಬಹಳ ನೊಂದಿದ್ದರು. ಈ ನೋವು ಇವರ ಆರೋಗ್ಯವನ್ನು ಹದಗೆಡಿಸಿತ್ತು. ಶತಾಯುಷಿ ಆಗುತ್ತಾರೆ ಎನ್ನುವ ನನ್ನ ನಿರೀಕ್ಷೆಯನ್ನು ನಿರಾಸೆಗೊಳಿಸಿ ನಮ್ಮನ್ನು ಅಗಲಿದ್ದಾರೆ. ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗ ಮತ್ತು ಬಂಧುಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ, ಹಿರಿಯ ಸಹಕಾರಿ ಧುರೀಣರಾಗಿ, ಕಾವೇರಿ ಹೋರಾಟದ ಮುಂಚೂಣಿ ನಾಯಕರಾಗಿದ್ದವರು ಚೌಡಯ್ಯ ಅವರು. 4 ಬಾರಿ ಕೆರಗೋಡು ಕ್ಷೇತ್ರದ ಶಾಸಕರಾಗಿ, 2 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಮಂಡ್ಯದ ಪ್ರತಿಷ್ಟಿತ ಪಿಇಟಿ ಅಧ್ಯಕ್ಷರಾಗಿ 31 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದರು. ಚೌಡಯ್ಯನವರು ಮಂಡ್ಯದ ಸ್ವಾಭಿಮಾನಿ ರಾಜಕಾರಣದ ಪ್ರತೀಕವಾಗಿದ್ದರು. ಇವರ ಅಗಲಿಕೆಯಿಂದ ನನ್ನ ಸಹೃದಯಿ ಹಿತೈಶಿಯೊಬ್ಬರನ್ನು ಕಳೆದುಕೊಂಡಿದ್ದೀನಿ ಎಂದು ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X