Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ಕವಿ ನಾಡೋಜ ಡಾ.ಚನ್ನವೀರ ಕಣವಿ...

ಹಿರಿಯ ಕವಿ ನಾಡೋಜ ಡಾ.ಚನ್ನವೀರ ಕಣವಿ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ16 Feb 2022 9:57 AM IST
share
ಹಿರಿಯ ಕವಿ ನಾಡೋಜ ಡಾ.ಚನ್ನವೀರ ಕಣವಿ ಇನ್ನಿಲ್ಲ

ಧಾರವಾಡ, ಫೆ.16: ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದ ನಾಡೋಜ ಡಾ.ಚನ್ನವೀರ ಕಣವಿ ಅವರು ಬುಧವಾರ ಬೆಳಗ್ಗೆ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಅನಾರೋಗ್ಯ ಕಾರಣ ಅವರನ್ನು ಕಳೆದ ಜನವರಿ 14ರಂದು ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಖ್ಯಾತರಾಗಿದ್ದ ಕಣವಿ ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ಧಾರವಾಡದಲ್ಲೇ ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣ ಪೂರೈಸಿ ಕಣವಿ 1952ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು. 1956ರಲ್ಲಿ ಅದೇ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ ಸಲ್ಲಿಸಿದರು.

ಕಾಲೇಜ್ ವಿದ್ಯಾರ್ಥಿಯಾಗಿದ್ದಾಗ ಕಣವಿಯವರ ಕವನಗಳನ್ನು ನೋಡಿ ಡಿವಿಜಿ ಮೆಚ್ಚುಗೆ ವ್ಯಕ್ತಪಡಿಸಿ ಹಾರೈಸಿದ್ದರು.

ವಿಶ್ವಭಾರತಿಗೆ ಕನ್ನಡದಾರತಿ..., ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ..., ಹೂವು ಹೊರಳುವುವು ಸೂರ್ಯನ ಕಡೆಗೆ..., ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ... ಇವು ಕಣವಿಯವರ ಕೆಲವೊಂದು ಜನಪ್ರಿಯ ಕಾವ್ಯಗಳಾಗಿವೆ.

ಕವನ ಸಂಕಲನ:

►ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ,  ಸೇರಿ 15ಕ್ಕೂ ಹೆಚ್ಚು ಕವನ ಸಂಕಲನಗಳ ರಚನೆ.

ವಿಮರ್ಶಾ ಕೃತಿಗಳು:

►ಸಾಹಿತ್ಯಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಮಧುರಚೆನ್ನ, ಸಮತೋಲನ ವಿಮರ್ಶಾತ್ಮಕ ಕೃತಿಗಳು

ಮಕ್ಕಳ ಕೃತಿ:

►ಹಕ್ಕಿ ಪುಕ್ಕ ಮತ್ತು ಚಿಣ್ಣರ ಲೋಕವ ತೆರೆಯೋಣ ಕವನ ಸಂಕಲನ

ಪ್ರಶಸ್ತಿ ಮತ್ತು ಪುರಸ್ಕಾರಗಳು

►1981ರಲ್ಲಿ ಜೀವಧ್ವನಿ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

►1996ರಲ್ಲಿ ಹಾಸನದಲ್ಲಿ ನಡೆದ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ

►2008ರ ಆಳ್ವಾಸ್ ನುಡಿಸಿರಿ ಸಮ್ಮೇಳನಾಧ್ಯಕ್ಷತೆ

► ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ,

► ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಬಸವ ಗುರು ಕಾರುಣ್ಯ ಪ್ರಶಸ್ತಿ, ನಾಡೋಜ ಪ್ರಶಸ್ತಿ,

► ಕರ್ನಾಟಕ ಕವಿರತ್ನ ಪ್ರಶಸ್ತಿ, ಅನಕೃ ನಿರ್ಮಾಣ ಪ್ರಶಸ್ತಿ, 2020ರಲ್ಲಿ ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X