Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾಡೋಜ ಚನ್ನವೀರ ಕಣವಿ ನಿಧನಕ್ಕೆ...

ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ವಾರ್ತಾಭಾರತಿವಾರ್ತಾಭಾರತಿ16 Feb 2022 10:55 AM IST
share
ನಾಡೋಜ ಚನ್ನವೀರ ಕಣವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಫೆ.16: ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನಾಡು ಕಂಡ ಅತ್ಯಂತ ಸೃಜನಶೀಲ ಸಾಹಿತಿ, ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಸ್ಥಾನವನ್ನು ಪಡೆದಿದ್ದರು.  ಕಳೆದ ನಾಲ್ಕು ದಶಕಗಳಿಂದ ಅವರು ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಆತ್ಮೀಯರಾಗಿದ್ದರು. ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರು ತಮ್ಮ ಮೃದು ಹಾಗೂ ಮಾನವೀಯತೆಯತೆಯ ಮಾತುಗಳಿಂದ ಮನಸ್ಸು ಗೆಲ್ಲುವ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನೋಡಿಯೇ ಇಲ್ಲ ಎಂದ ಮುಖ್ಯಮಂತ್ರಿ, ಎಲ್ಲಾ ಸಮಸ್ಯೆಗಳಿಗೆ ಸಕಾರಾತ್ಮಕ ಪರಿಹಾರ ಸೂಚಿಸುವ ಸಾಹಿತ್ಯ ರಚನೆ ಮಾಡಿದ್ದಾರೆ. ಸಾಹಿತ್ಯದ ಮುಖಾಂತರ ತಮ್ಮ ಕಲ್ಪನೆ ಮತ್ತು ವಾಸ್ತವಾಂಶವನ್ನು ಕೂಡ ಪರಿಣಾಮಕಾರಿಯಾಗಿ ಬಿಂಬಿಸಿದವರು. ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ  ಭಾಜನರಾಗಿದ್ದರು. ಪ್ರಶಸ್ತಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅವರ ವ್ಯಕ್ತಿತ್ವವಿತ್ತು. ಸದಾ ಕಾಲ ತಮ್ಮ ಸಂಯಮ ಹಾಗೂ ಗಾಂಭೀರ್ಯತೆಯನ್ನು ಮೆರೆದವರು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹಳ ದೊಡ್ಡ ಹಾನಿಯಾಗಿದೆ. ಒಬ್ಬ ಧೀಮಂತ, ಮಾರ್ಗದರ್ಶಕರು ಇಲ್ಲದಂತಾಗಿದೆ. ಸಾತ್ವಿಕ ಚಿಂತಕರು ಇಲ್ಲದ ಈ ಕಾಲದಲ್ಲಿ ಚನ್ನವೀರ ಕಣವಿ ಇರುವಿಕೆ ಪ್ರಸ್ತುತವಾಗಿತ್ತು. ಈ ಸಂದರ್ಭದಲ್ಲಿ ಅವರನ್ನು ಕಳೆದುಕೊಂಡು ಕನ್ನಡ ನಾಡು ಬಡವಾಗಿದೆ. ಚಂಪಾ, ಪ್ರೊ.ಸಿದ್ದಲಿಂಗಯ್ಯ ಅವರನ್ನು ಕಳೆದುಕೊಂಡ ಬೆನ್ನಲ್ಲೇ ಒಬ್ಬೊಬ್ಬರಾಗಿ ಸಾಹಿತ್ಯ ಲೋಕದ ದಿಗ್ಗಜರನ್ನು ಕಳೆದುಕೊಳ್ಳುತ್ತಿದ್ದೇವೆ. ಕಳೆದುಕೊಂಡ ಮಹನೀಯರ ಸ್ಮರಣೆಯಿಂದ ಪ್ರೇರಣೆ ಪಡೆಯುತ್ತಾ ಹೊಸ ಸಾಹಿತಿಗಳು, ಚಿಂತಕರು ಬರಬೇಕು. ಅವರೂ ಸಹ ಈ ದಿಗ್ಗಜರು ಏರಿದ್ದ ಮೇರು ಸ್ಥಾನಕ್ಕೆ ತಲುಪಬೇಕು. ಆಗ ಮಾತ್ರ ಕನ್ನಡದ ಶ್ರೀಮಂತ ಸಾಹಿತ್ಯ ನಿರಂತರವಾಗಿ ಮುಂದುವರೆಯುತ್ತದೆ. 8 ಜ್ಞಾನ ಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ನಮ್ಮ ಕರ್ನಾಟಕದ್ದು. ಇನ್ನಷ್ಟು ಜ್ಞಾನಪೀಠಗಳು ಬರುವ ರೀತಿಯಲ್ಲಿ ಸಾಹಿತ್ಯ ಲೋಕ  ತನ್ನ ಕೊಡುಗೆಯನ್ನು ಸಾಹಿತ್ಯ ಲೋಕಕ್ಕೆ ನೀಡಬೇಕೆಂದರು.

ಸರ್ಕಾರ ಸಾಹಿತ್ಯ ಕ್ಷೇತ್ರಕ್ಕೆ ಅಗತ್ಯವಿರುವ ಬೆಂಬಲ ನೀಡಲು ಸಿದ್ಧವಿದೆ. ಈ ಮುಖಾಂತರವೇ ಕಣವಿಯವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X