ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಫೆ.16: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರವರ್ಗ-1ರ ಬೆಸ್ತ, ಅಂಬಿಗ, ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
18ರಿಂದ 55 ವರ್ಷದೊಳಗಿನ, 1ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ಆದಾಯ 98,000 ರೂ. ಒಳಗಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ -https://ambigaradevelopment.karnataka.gov.in- ಅಥವಾ ಜಿಲ್ಲಾ ವ್ಯವಸ್ಥಾ ಪಕರ ಕಚೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ:0820-2574882ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story