ಕಸಾಪ ಉಡುಪಿ ತಾಲೂಕು ಘಟಕಕ್ಕೆ ರವಿರಾಜ್ ಎಚ್.ಪಿ. ಸಾರಥ್ಯ

ಉಡುಪಿ, ಫೆ.16: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾಗಿ ರಂಗನಿರ್ದೇಶಕ ರವಿರಾಜ್ ಎಚ್.ಪಿ. ಇವರನ್ನು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಯ್ಕೆ ಮಾಡಿದ್ದಾರೆ.
ರವಿರಾಜ ಎಚ್.ಪಿ ಉಡುಪಿಯ ಪ್ರತಿಷ್ಠಿತ ಸಾಂಸ್ಕೃತಿಕ ಸಂಘಟನೆಯಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕರಾಗಿದ್ದಾರೆ. ಹಲವಾರು ನಾಟಕಗಳಿಗೆ ನಿರ್ದೇಶಕರಾಗಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದು, ಪ್ರಸ್ತುತ ಫಾರ್ಮಸೂ ಟಿಕಲ್ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Next Story