ಬಂಟರ ಕ್ರೀಡೋತ್ಸವ: ಸುರತ್ಕಲ್ ಗ್ರಾಮ ಚಾಂಪ್ಯನ್

ಸುರತ್ಕಲ್, ಫೆ.16: ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಇತ್ತೀಚೆಗೆ ನಡೆದ ಬಂಟರ ಕ್ರೀಡೋತ್ಸವದಲ್ಲಿ ಸುರತ್ಕಲ್ ಗ್ರಾಮ ಅತ್ಯಧಿಕ ಅಂಕ ಗಳಿಸಿ ಸಮಗ್ರ ಚಾಂಪ್ಯನ್ ಪ್ರಶಸ್ತಿ ಪಡೆದುಕೊಂಡಿದೆ.
ಕೂಟದಲ್ಲಿ ಚೇಳಾರ್ ಗ್ರಾಮ ದ್ವೀತೀಯ, ಇಡ್ಯಾ ಗ್ರಾಮ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಪಥ ಸಂಚಲನ ವಿಭಾಗದಲ್ಲಿ ಇಡ್ಯಾ ಗ್ರಾಮ ಪ್ರಥಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಅತಿಥಿಯಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಯುವ ವಿಭಾಗದ ಅಧ್ಯಕ್ಷ ದೇವಿಚರಣ್ ಶೆಟ್ಟಿ, ಕಾರ್ಪೊರೇಟರ್ ವರುಣ್ ಚೌಟ, ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಎನ್. ಅಶೋಕ್ ಕುಮಾರ್ ಶೆಟ್ಟಿ, ಮುಂಚೂರು ಕೆಳಗಿನ ಮನೆ ಸತೀಶ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಭಾಗವಹಿಸಿದ್ದರು.
ಸಂಘದ ಉಪಾಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಸುರತ್ಕಲ್, ಜೊತೆ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಕ್ರೀಡಾ ಕಾರ್ಯದರ್ಶಿ ಹರೀಶ್ ಕೆ. ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಚಿತ್ರಾ ಜೆ. ಶೆಟ್ಟಿ, ಮಹಿಳಾ ಕ್ರೀಡಾ ಕಾರ್ಯದರ್ಶಿ ಅಕ್ಷತಾ ಜಿ. ಶೆಟ್ಟಿ ಉಪಸ್ಥಿತರಿದ್ದರು.
ವಾಲಿಬಾಲ್ ಪಂದ್ಯಾಟದಲ್ಲಿ ಕೆಂಜಾರ್ ಗ್ರಾಮ ಪ್ರಥಮ, ಸುರತ್ಕಲ್ ಗ್ರಾಮ ದ್ವಿತೀಯ ಮತ್ತು ಪುರುಷರ ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಗ್ರಾಮ ಪ್ರಥಮ, ಕೆಂಜಾರ್ ಗ್ರಾಮ ದ್ವಿತೀಯ ಹಾಗೂ ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ಇಡ್ಯಾ ಗ್ರಾಮ ಪ್ರಥಮ, ಸುರತ್ಕಲ್ ಗ್ರಾಮ ದ್ವಿತೀಯ, ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಕಾಟಿಪಳ್ಳ ಗ್ರಾಮ ಪ್ರಥಮ, ಇಡ್ಯಾ ಗ್ರಾಮ ದ್ವಿತೀಯ ಪ್ರಶಸ್ತಿ ಗಳಿಸಿತ್ತು.







