ದ.ಕ. ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷಗೆ ಕೊಲೆ ಬೆದರಿಕೆ: ಪೊಲೀಸ್ ಆಯುಕ್ತರಿಗೆ ದೂರು

ಮಂಗಳೂರು, ಫೆ.16: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ದ.ಕ. ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರು ದಾಖಲಾಗಿದೆ.
ಈ ಬಗ್ಗೆ ಸೂಕ್ತ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಕ್ಷಿತ್ ಸುವರ್ಣ ನಗರ ಪೊಲೀಸ್ ಆಯುಕ್ತರಿಗೆ ಬುಧವಾರ ದೂರು ಸಲ್ಲಿಸಿ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಹಿಜಾಬ್ ವಿಚಾರವಾಗಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಕೆಟ್ಟಪದಗಳನ್ನು ಬಳಸಿ ನಿಂದಿಸಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.
Next Story