ಫೆ.28ರವರೆಗೆ ಕೇರಳ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ: ದ.ಕ.ಜಿಲ್ಲಾಧಿಕಾರಿ
ಮಂಗಳೂರು, ಫೆ.16: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ರಾಜ್ಯ ಸರಕಾರದ ನಿರ್ದೇಶನದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ವಯ ಫೆ.28ರವರೆಗೆ ಕೇರಳ-ಕರ್ನಾಟಕ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮುಂದುವರಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮದಂತೆ ಕಾನೂನು ಕ್ರಮಗಳ ಜತೆಗೆ ಇತರೆ ಕಾನೂನು ನಿಬಂಧನೆಗಳ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Next Story





