Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೂ ಮಂಜೂರಾತಿ ಅರ್ಜಿ ಕಾಲ ವಿಸ್ತರಣೆ:...

ಭೂ ಮಂಜೂರಾತಿ ಅರ್ಜಿ ಕಾಲ ವಿಸ್ತರಣೆ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ16 Feb 2022 9:14 PM IST
share
ಭೂ ಮಂಜೂರಾತಿ ಅರ್ಜಿ ಕಾಲ ವಿಸ್ತರಣೆ: ಸಚಿವ ಆರ್.ಅಶೋಕ್

ಬೆಂಗಳೂರು, ಫೆ.16: ಸರಕಾರಿ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಹೊಬಳಿ ಶಾಂತಗ್ರಾಮದ ಭೂ ಅಕ್ರಮಗಳನ್ನು ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆ ನಡೆಸುವ ಮಹತ್ವದ ನಿರ್ಣಯಗಳನ್ನು ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದರು.

ಬುಧವಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಪಕ್ಷಗಳ ಧರಣಿಯ ನಡುವೆಯೇ ಸಭಾಪತಿ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು

ಆಡಳಿತ ಪಕ್ಷದ ಸದಸ್ಯ ಹಣುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರ ನೀಡಿದ ಕಂದಾಯ ಸಚಿವ ಆರ್.ಅಶೋಕ್ ಅವರು, ದರ್ಕಾಸ್ತು ಸರಕಾರಿ ಭೂಮಿ ಮಂಜೂರಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿ ಶಾಂತನಪುರ ಗ್ರಾಮದ ಸರ್ವೇಸಂಖ್ಯೆ 9 ರಲ್ಲಿ ದಲಿತರಿಗೆ ಮಂಜೂರಾಗಿದ್ದ 240 ಎಕರೆಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿ ಅಕ್ರಮ ಎಸಗಲಾಗಿದೆ. ಶಾಸಕರ ಮನವಿಯ ಮೇರೆಗೆ ಪ್ರಕರಣವನ್ನು ಎಸಿಬಿ ತನಿಖೆಗೆ ಒಪ್ಪಿಸಲಾಗುತ್ತದೆ ಎಂದು ಸದಸ್ಯ ರಘುನಾಥ್‍ರಾವ್ ಮಲ್ಕಾಪೂರೆ ಅವರ ಪ್ರಶ್ನೆಗೆ ಉತ್ತರಿಸಿದರು.

ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಅಶೋಕ್, ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳು ಹಾಗೂ 53 ಉಪವಿಭಾಗಗಳಿವೆ. ಕಂದಾಯ ಇಲಾಖೆಗೆ 22 ಸಾವಿರ 33 ಹುದ್ದೆಗಳು ಮಂಜೂರಾಗಿದ್ದು, 16 ಸಾವಿರದ 355 ಮಂದಿ ಕೆಲಸ ಮಾಡುತ್ತಿದ್ದಾರೆ. 5 ಸಾವಿರದ 678 ಹುದ್ದೆಗಳು ಖಾಲಿ ಇವೆ. ಎಸ್ ಡಿ ಎ ಮತ್ತು ಗ್ರಾಮ ಲೆಕ್ಕಿಗರನ್ನು ನೇಮಿಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ಸದಸ್ಯ ಅರುಣ್ ಅವರು ವಸತಿ ಯೋಜನೆಗಳ ಫಲಾನುಭವಿಗಳಿಗೆ ಹಂಚಿಕೆಯಾದ ಮನೆಗಳ ಜಿಪಿಎಸ್ ಅಳವಡಿಕೆಯಲ್ಲಿ ತಾಂತ್ರಿಕ ತೊಂದರೆಯಾಗುತ್ತಿರುವುದನ್ನು ಪ್ರಸ್ತಾಪಿಸಿದರು.

ಸುಮಾರು ವರ್ಷಗಳ ಹಿಂದೆ ನಿರ್ಮಿಸಿರುವ ಹಳೆ ಮನೆಗಳನ್ನು ಜಿಪಿಎಸ್ ಅಳವಡಿಸಿರುವ ಕಾರಣ ಅಂತಹ ಮನೆಗಳನ್ನು ಹಂತವಾರು ಫೋಟೋ ಇರದ ಮನೆಗಳೆಂದು ಪರಿಗಣಿಸಿ ತಾತ್ಕಾಲಿಕವಾಗಿ ಅನುದಾವನ್ನು ತಡೆ ಹಿಡಿಯಲಾಗಿದೆ. ರಾಜ್ಯದಲ್ಲಿ ಇಂತಹ 37 ಸಾವಿರದ 252 ಮನೆಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.

ಗದ್ದಲದ ನಡುವೆ ಸಚಿವರು ಸದಸ್ಯರು ಕೇಳಿದ ಪ್ರಶ್ನೆಗೆ ಬದಲಿ ಉತ್ತರ ನೀಡಿದರು. ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿದ್ದರಿಂದ ಪ್ರಶ್ನೋತ್ತರದಿಂದ ದೂರ ಉಳಿದು, ಸಚಿವ ಈಶ್ವರಪ್ಪ ವಿರುದ್ಧ ಘೋಷಣೆ ಕೂಗಲಾರಂಭಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X