ಹಿಜಾಬ್ ವಿಚಾರ: ಸರಕಾರ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ; ಯು.ಟಿ ಖಾದರ್

ಬೆಂಗಳೂರು, ಫೆ.16: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶಕ್ಕೆ ವಿರುದ್ಧವಾಗಿ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದೆ. ಅಧಿಕಾರಿಗಳು ಈ ಆದೇಶ ಮುಂದಿಟ್ಟುಕೊಂಡು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ಹಿಜಾಬ್ ಸಂಬಂಧಿತ ಸುದ್ದಿಗಳನ್ನು ಮಾಡುವಾಗ ಮಹಿಳೆಯರು ಹಾಗೂ ಮಕ್ಕಳ ಬಗ್ಗೆ ಸೂಕ್ಷ್ಮ ವಾಗಿರುವಂತೆ ಅವರು ಮಾಧ್ಯಮಗಳಿಗೆ ಆಗ್ರಹಿಸಿದ್ದಾರೆ.
ಶಾಂತಿಯುತ ವಾತಾವರಣದಲ್ಲಿ ಶೈಕ್ಷಣಿಕ ಸಂಸ್ಥೆಗಳು ಆರಂಭಗೊಳ್ಳುವಂತೆ ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಆದರೆ, ಸರಕಾರ ಅದಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ ಎಂದು ಖಾದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





