ಫೆ. 19ರಿಂದ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ, ಫೆ.17: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19ರಿಂದ 21ರವರೆಗೆ ನಗರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿ ನಲ್ಲಿ (ಪ್ರೌಢಶಾಲಾ ಭಾಗ) ನಡೆಯಲಿದೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂವರ್ಾರಾವ್ ಎಂ ಆದೇಶ ಹೊರಡಿಸಿದ್ದಾರೆ.
ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಫೆ.19ರಿಂದ 21ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Next Story