ಫೆ.18: ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾದಿಂದ ಪ್ರತಿಭಟನೆ
ಮಂಗಳೂರು, ಪೆ.17: ರಾಜ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿಕೊಂಡು ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶಿಸಲು ಅನುಮತಿ ನಿರಾಕರಿಸುವ ಕ್ರಮವನ್ನು ಖಂಡಿಸಿ ದ.ಕ.ಜಿಲ್ಲಾ ಜಂಇಯ್ಯತುಲ್ ಖುತ್ಬಾ (ಇಮಾಮರುಗಳ ಒಕ್ಕೂಟ)ದ ವತಿಯಿಂದ ಫೆ.18ರಂದು ಸಂಜೆ 4ಕ್ಕೆ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಲಿದೆ.
ಹಿಜಾಬನ್ನು ಬಲವಂತವಾಗಿ ತೆಗೆಸುವ ಕೆಲವು ಶಾಲಾ ಕಾಲೇಜುಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದೆ. ಇದು ವಿದ್ಯಾರ್ಥಿನಿಯರು ಮತ್ತು ಪೋಷಕರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಹೆಣ್ಣುಮಕ್ಕಳ ಶಿಕ್ಷಣದ ವಿಚಾರದಲ್ಲೂ ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ರಹ್ಮಾನಿ ಪರ್ಲಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story