ಉಡುಪಿ ಜಿಲ್ಲೆಯಲ್ಲಿ ಸಚಿವ ಅಶೋಕ್, ಸಿ.ಸಿ.ಪಾಟೀಲ್ ಪ್ರವಾಸ
ಉಡುಪಿ, ಫೆ.17: ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಫೆ.19 ಮತ್ತು 20ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10:30ಕ್ಕೆ ಕಾರ್ಕಳದ ಕುಕ್ಕುಂದೂರು ಗ್ರಾಪಂ ಮೈದಾನದಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಂದಾಯ ಮೇಳ ಕಾರ್ಯಕ್ರಮ, ಅಪರಾಹ್ನ 12:00ಕ್ಕೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾಯರ್ಕ್ರಮದಲ್ಲಿ ಭಾಗವಹಿಸಲಿರುವರು.
ಸಿ.ಸಿ.ಪಾಟೀಲ್:ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಫೆ.18 ಮತ್ತು 19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.18ರಂದು ರಾತ್ರಿ 10 ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಫೆ.19ರಂದು ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯ ಕಟ್ಟಡದ 3ನೇ ಮಹಡಿಯ ಮತ್ತು ನೂತನವಾಗಿ ನಿರ್ಮಿಸಲ್ಪಟ್ಟ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಗದಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
Next Story