ಸ್ಕಿಲ್ ಹಬ್ ಕೇಂದ್ರ ಸ್ಥಾಪನೆ
ಉಡುಪಿ, ಫೆ.17: ಕೇಂದ್ರ ಶಿಕ್ಷಣ ಮಂತ್ರಾಲಯ, ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (ಎನ್ಎಸ್ಡಿಸಿ) ಹಾಗೂ ಎನ್ಎಸ್ಕ್ಯೂಎಫ್ ಸಹಯೋಗದಲ್ಲಿ ಶಾಲೆಯಿಂದ ಹೊರಗುಳಿದಿರುವ 20 ಕಿ.ಮೀ. ವ್ಯಾಪ್ತಿಯೊಳಗಿನ ಅರೆಕಾಲಿಕ ನೌಕರರು ಮತ್ತು ಆಸಕ್ತ 15ರಿಂದ 45 ವಯೋಮಿತಿ ಒಳಗಿನವರಿಗೆ ಸಂಜೆಯ ಅವಧಿಯಲ್ಲಿ 2 ಗಂಟೆಗಳ ಕಾಲ ಕೌಶಲ್ಯ ತರಬೇತಿ ನೀಡಲು ಕಾರ್ಕಳ ತಾಲೂಕಿನ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಸ್ಕಿಲ್ ಹಬ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಮೇಲ್ಕಾಣಿಸಿದ ಕೇಂದ್ರಗಳಲ್ಲಿ ಐಟೀಸ್ (ಇನ್ಫಾರ್ಮೆಶನ್ ಟೆಕ್ನಾಲಜಿ ಎನೇಬಲ್ಡ್ ಸರ್ವಿಸಸ್) ಹಾಗೂ ಅಟೋಮೊಬೈಲ್ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಮೊ.ನಂ: 9448409355, 9449943882, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ: 9449449602, 9591348695 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇಲ್ಕಾಣಿಸಿದ ಕೇಂದ್ರಗಳಲ್ಲಿ ಐಟೀಸ್ (ಇನ್ಫಾರ್ಮೆಶನ್ ಟೆಕ್ನಾಲಜಿ ಎನೇಬಲ್ಡ್ ಸರ್ವಿಸಸ್) ಹಾಗೂ ಅಟೋಮೊಬೈಲ್ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ಮೊ.ನಂ: 9448409355, 9449943882, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ:9449449602, 9591348695 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.