ಹಿಂ.ವ. ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ಉಡುಪಿ, ಫೆ.17: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿಗೆ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯತ, ಮರಾಠ ಮತ್ತು ಇದರ ಉಪಜಾತಿಗಳು ಹೊರತು ಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 1ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ಆದಾಯ 40,000 ರೂ. ಒಳಗಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ -www.dbcdc.kanataka.gov.in -ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820- 2574882ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸಾ್ಥಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.