ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
ಉಡುಪಿ, ಫೆ.17: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನ ಮಾಡಲು ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಹತ್ತು ವಷರ್ಗಳಿಂದ ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿ ಕೊಂಡಿರುವ, ಸಾವಯವ ಕೃಷಿಗೆ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಕನಿಷ್ಠಿ 10 ಹೆಕ್ಟೇರ್ ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರುವ ಹಾಗೂ ಆ ವ್ಯಾಪ್ತಿಯ ಕೃಷಿ ವಿವಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವ ನೋಂದಾ ಯಿತ ಸಾಮಾಜಿಕ ಸಂಸ್ಥೆಗಳು ಫೆ.24ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾ ಆಡಳಿತ ಕಚೇರಿ ಸಂಕೀರ್ಣ, ಎರಡನೆ ಮಹಡಿ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.