ಅಕ್ರಮ ಮರ ಸಾಗಾಟ ಆರೋಪ : ಇಬ್ಬರ ಬಂಧನ

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಇಬ್ಬರನ್ನು ಬಂಧಿಸಿ ಲಾರಿ ಸಮೇತ ಅದರಲ್ಲಿದ್ದ ಮರದ ದಿಮ್ಮಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಬಲ್ಯ ಗ್ರಾಮದ ಹೊಸ್ಮಠ ನಿವಾಸಿ ಅಬ್ದುರ್ರಝಾಕ್ ಹಾಗೂ ಪೆರಾಬೆ ಗ್ರಾಮದ ಕುಂತೂರು ನಿವಾಸಿ ಉಮ್ಮರ್ ಫಾರೂಕ್ ಬಂಧಿತ ಆರೋಪಿಗಳು. ಇವರು ಲಾರಿಯಲ್ಲಿ ಅಕೇಶಿಯಾ ಮರದ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ನಟ್ಟಿಬೈಲ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದೆ. ವಶಪಡಿಸಿಕೊಂಡ ಮರದ ಮೌಲ್ಯ 51,678 ಹಾಗೂ ಲಾರಿಯ ಮೌಲ್ಯ 3 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
Next Story