Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.19ರಂದು ಆಲಂಗಾರು ಸಂತ ಥೋಮಸ್ ಶಾಲೆಯ...

ಫೆ.19ರಂದು ಆಲಂಗಾರು ಸಂತ ಥೋಮಸ್ ಶಾಲೆಯ ಶತಮಾನೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ17 Feb 2022 10:39 PM IST
share
ಫೆ.19ರಂದು ಆಲಂಗಾರು ಸಂತ ಥೋಮಸ್ ಶಾಲೆಯ ಶತಮಾನೋತ್ಸವ ಸಮಾರಂಭ

ಮೂಡುಬಿದಿರೆ: ಆಲಂಗಾರು ಸಂತ ಥೋಮಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಮಾರಂಭ ಫೆ.19ರಂದು ಕೆಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ  ಡಾ.ಪೀಟರ್ ಪಾವ್ಲ್ ಡಿ'ಸೋಜ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಶಾಲಾ ಸಂಚಾಲಕ ಫಾ.ವಾಲ್ಟರ್ ಡಿ'ಸೋಜ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಷ್ಟ್ರದ ಶೈಕ್ಷಣಿಕ ಸೇವೆಯಲ್ಲಿ ಶತ ಸಂವತ್ಸರಗಳನ್ನು ಸಾರ್ಥಕವಾಗಿ ಪೂರೈಸಿದ ಹಿನ್ನಲೆಯಲ್ಲಿ ಈ ಸಂಭ್ರಮಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಲುದ್ದೇಶಿಸಿದ್ದೇವೆ. ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ರೂಪಿಸಲಾಗಿದೆ ಎಂದರು.

ಒಂದು ಕೋಟಿ ಯೋಜನೆ: ಶತಮಾನೋತ್ಸವದ ಅಂಗವಾಗಿ ಹತ್ತು ಲಕ್ಷ ವೆಚ್ಚದಲ್ಲಿ  ಶಾಲಾ ಛಾವಣಿ ನವೀಕರಣ, ಅನುದಾನಿತ ಶಾಲೆಯ ಸಹಾಯಕ ಸಿಬ್ಬಂದಿಗಳಿಗೆ ವೇತನ  ನಿಧಿಯನ್ವಯ ಗೌರವ ಶಿಕ್ಷಕ ನಿಧಿಗಾಗಿ 40ಲಕ್ಷ, ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಸಹಾಯಾರ್ಥವಾಗಿ ಬಡ ವಿದ್ಯಾರ್ಥಿಗಳ ನಿಧಿಗೆ ಹತ್ತು ಲಕ್ಷ, ಶತಮಾನೋತ್ಸವ ಆಟದ ಬಾಲವನ ನಿರ್ಮಾಣಕ್ಕೆ ಹತ್ತು ಲಕ್ಷ, ಬಡ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯ ಸಹಾಯಾರ್ಥ ನಿಧಿಯನ್ವಯ ಕನಿಷ್ಟ ಎರಡು ವಿದ್ಯಾರ್ಥಿಗಳಿಗೆ ಹತ್ತು ಲಕ್ಷ ಹಾಗೂ ಹತ್ತು ಲಕ್ಷ ವೆಚ್ಚದಲ್ಲಿ ಶತಮಾನೋತ್ಸವ ಸ್ಮಾರಕ ಬಯಲು ರಂಗ ಮಂಟಪ ರಚನೆ, ಹತ್ತು ಲಕ್ಷ ವೆಚ್ಚದಲ್ಲಿ ಶಾಲಾ ಸಂಪರ್ಕ ರಸ್ತೆಗೆ ಇಂಟರ್ ಲಾಕ್ ಅಳವಡಿಕೆ, ಇವೇ ಮೊದಲಾದ ಯೋಜನೆಗಳನ್ನು ದಾನಿಗಳ, ವಿದ್ಯಾಭಿಮಾನಿಗಳ ಸಹಕಾರದೊಂದಿಗೆ ನಡೆಸಲಾಗುತ್ತಿದೆ ಎಂದು ವಿವರಿಸಿದರು. 

ಸಾರ್ಥಕ ನೂರು ವರ್ಷ: 1921ರಲ್ಲಿ ವಂ.ಗುರು ಫಾವುಸ್ತಿನ್ ಕೋರ್ಟಿಯವರ ಸತತ ಪರಿಶ್ರಮದಿಂದ  ಸಂತ ಥೋಮಸ್ ಶಾಲೆ ಸ್ಥಾಪನೆಗೊಂಡಿತು. 1929ರಲ್ಲಿ ಪೂಜ್ಯ ಗುರು ಎಫ್ ಎಲಿಯಾಸ್ ಡಿ'ಸೋಜ ಶಾಲಾ ಸಂಚಾಲಕರಾಗಿ ಕಾರ್ಯನಿರ್ವಹಿಸಿ ಶಾಲೆ ಪ್ರಗತಿಪಥದತ್ತ ಸಾಗಲು ಕಾರಣೀಕರ್ತರಾಗಿದ್ದರು. 1952ರಲ್ಲಿ ಸಂತ ಥೋಮಸ್ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರುವಂತಾಯಿತು. ಕಳೆದ ನೂರು ವರುಷಗಳಿಂದ ಆಲಂಗಾರು ಹಾಗೂ ಸುತ್ತಮುತ್ತಲಿನ ಊರುಗಳ ಎಳೆಯ ಮಕ್ಕಳಿಗೆ ವಿದ್ಯಾದಾನ ಮಾಡಿ ಅವರ ಭವಿಷ್ಯವನ್ನು ರೂಪಿಸುವ ಮಹತ್ತರ ಕಾರ್ಯ ಈ ಶಾಲೆಯಿಂದಾಗಿದೆ. ಈ ಶಾಲೆಯಲ್ಲಿ ಜ್ಞಾನಾರ್ಜನೆಗೈದ ವಿದ್ಯಾರ್ಥಿಗಳು ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಾಗಿ, ಸಾಮಾಜಿಕ ಧಾರ್ಮಿಕ ಮುಖಂಡರಾಗಿ, ಧರ್ಮಾಧ್ಯಕ್ಷರಾಗಿ, ಯಶಸ್ವೀ ಉದ್ಯಮಿಗಳಾಗಿ, ವಕೀಲರಾಗಿ, ವೈದ್ಯರಾಗಿ, ಕೃಷಿಕರಾಗಿ, ಸಮಾಜದ ದೊಡ್ಡ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ. ರಾಜ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.  ಸಂತ ಥೋಮಸ್ ಕನ್ನಡ ಮಾದ್ಯಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಸಾರ್ಥಕ ನೂರು ಸಂವತ್ಸರಗಳನ್ನು ಪೂರೈಸಿದೆ. ಪ್ರಸ್ತುತ 143ವಿದ್ಯಾರ್ಥಿಗಳು ಜ್ಞಾನಾರ್ಜನೆಗೈಯುತ್ತಿದ್ದಾರೆ. ಈ ಶತ ಸಂಭ್ರಮ ಅವಿಸ್ಮರಣೀಯವಾಗಿಸಲು ಶಾಲಾ ಆಡಳಿತ ಮಂಡಳಿ, ಶಿಕ್ಷಣಾಸಕ್ತರು, ಶಾಲಾ ಸಿಬ್ಬಂದಿಗಳು, ಹಳೆವಿದ್ಯಾರ್ಥಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. 

ಶತಮಾನೋತ್ಸವ ಕಾರ್ಯಕ್ರಮ: ಫೆ.19ರಂದು ಬೆಳಗ್ಗೆ  ಶತಮಾನೋತ್ಸವದಂಗವಾಗಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಲಾ ಹಳೆವಿದ್ಯಾರ್ಥಿ ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪರಮಪೂಜ್ಯ ಡಾ.ಫ್ರಾನ್ಸಿಸ್ ಸೆರಾವೋ ಎಸ್.ಜೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಜಸ್ಟೀಸ್ ಎಸ್ ಅಬ್ದುಲ್ ನಝೀರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕ್ರೈಸ್ತ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೋಯ್ಲಸ್ ಡಿ'ಸೋಜ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಕೆಥೋಲಿಕ್ ಶಿಕ್ಷಣ ಮಂಡಳಿ ಕಾರ್ಯದರ್ಶಿ ವಂ.ಫಾ, ಆಂಟನಿ ಸೆರಾ, ಮೂಡುಬಿದಿರೆ ವಲಯ ಪ್ರಧಾನ ಕೆಥೋಲಿಕ್ ಧರ್ಮಗುರು ಫಾ.ಪಾವ್ಲ್ ಸಿಕ್ವೇರ, ಆಲಂಗಾರು ಬಡಗ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ್ ಭಟ್, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು, ಅದಾನಿ ಸಮೂಹ ಸಂಸ್ಥೆಯ ಉಪಾಧ್ಯಕ್ಷ ಕಿಶೋರ್ ಆಳ್ವ, ಐರಿನ್ ಮಿನೇಜಸ್, ಪ್ರೆಸಿಲ್ಲಾ ಡಿ'ಮೆಲ್ಲೋ, ಲಿಝಿ ಚಾಕೋ, ಉದ್ಯಮಿ ಅಬ್ದುಲ್ ರವೂಫ್, ಉದ್ಯಮಿ ಕೆ.ಎಮ್.ಶೆಟ್ಟಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ಬೆಳಗ್ಗೆ 9.30ಕ್ಕೆ ದಿವ್ಯ ಬಲಿಪೂಜೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದು ವಿವರಿಸಿದರು.

ಶತಮಾನೋತ್ಸವ ಸಮಿತಿ ಸಂಯೋಜಕ ಪಿ.ಕೆ.ಥೋಮಸ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಹೆಲೆನ್ ಗೋವಿಯಸ್, ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಲ್ವಿಯಾ ಡೆಸ್ಸಾ, ಶತಮಾನೋತ್ಸವ ಸಮಿತಿಯ ರಾಜೇಶ್ ಡಿ'ಸೋಜ, ಮೆಬಲ್ ಲೋಬೋ, ಲಾರೆನ್ಸ್ ಡಿ'ಕುನ್ಹಾ, ಎಲಿಯಾಸ್ ಫೆನಾರ್ಂಡೀಸ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X