Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.27ರಿಂದ ಪಲ್ಸ್ ಪೋಲಿಯೋ ಅಭಿಯಾನ

ಫೆ.27ರಿಂದ ಪಲ್ಸ್ ಪೋಲಿಯೋ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ18 Feb 2022 10:12 PM IST
share

ಮಂಗಳೂರು, ಫೆ.18. ದ.ಕ.ಜಿಲ್ಲೆಯಲ್ಲಿ ಫೆ.27ರಿಂದ ಮಾರ್ಚ್ 2ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ನಗರದ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕಾಗಿ 0-5 ವರ್ಷದೊಳಗಿನ 1,54,023 ಮಕ್ಕಳನ್ನು ಗುರುತಿಸಲಾಗಿದ್ದು, ಅವರೆಲ್ಲರಿಗೂ ಫೆ.27ರಿಂದ ಪ್ರಾರಂಭವಾಗುವ ಬೂತ್ ಅಭಿಯಾನದಲ್ಲಿ ಲಸಿಕೆ ನೀಡಬೇಕು. ಈ ಅವಧಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯು 2 ದಿನ ಗ್ರಾಮೀಣ ಪ್ರದೇಶಗಳಲ್ಲಿ ಮನೆ, ಮನೆ ಭೇಟಿ ನೀಡಿ ಬಿಟ್ಟು ಹೋಗಿರುವ ಮಕ್ಕಳಿಗೆ ಲಸಿಕೆಯನ್ನು ನೀಡಬೇಕು. ನಗರ ಪ್ರದೇಶದಲ್ಲಿ 3 ದಿನ ಮನೆ ಭೇಟಿ ನೀಡಿ ಎಲ್ಲಾ ಅರ್ಹ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಬೇಕು ಎಂದು ತಿಳಿಸಿದರು.

ಈ ಅಭಿಯಾನವನ್ನು ಯಶಸ್ವಿಗೊಳಿಸಲು 921 ಲಸಿಕಾ ಬೂತ್‌ಗಳನ್ನು ರಚಿಸಲಾಗಿದೆ, ಅಲ್ಲದೆ 29 ಟ್ರಾನ್ಸಿಸ್ಟ್ ಬೂತ್ ಹಾಗೂ 5 ಮೊಬೈಲ್ ಟೀಮ್ಗಳ ಮೂಲಕ ಲಸಿಕಾ ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಲಾಗುವುದು. ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಶಾಲೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ತೆರೆಯಲಾಗುವುದು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಎಲ್ಲಾ ಶಾಲೆಗಳಿಗೆ, ನರ್ಸರಿ ಶಾಲೆ, ಶಿಶುಮಂದಿರಗಳಿಗೆ ಮಾಹಿತಿ ನೀಡಬೇಕು ಹಾಗೂ ಎಲ್ಲಾ ಶಾಲೆಗಳಲ್ಲಿ ಜರಗುವ ಪೋಷಕ-ಶಿಕ್ಷಕರ ಸಭೆಯಲ್ಲೂ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಡಿಸಿ ಸೂಚಿಸಿದರು.

ಕಾರ್ಯಕ್ರಮದ ಯಶಸ್ಸಿಗಾಗಿ ಮೆಸ್ಕಾಂ ಫೆ.24ರಿಂದ ಮಾರ್ಚ್ 2ರವರೆಗೆ ವಿದ್ಯುತ್ ಕಡಿತ ಮಾಡಬಾರದು. ಅಗತ್ಯವಿರುವ ವಾಹನಗಳನ್ನು ಸಾರಿಗೆ ಇಲಾಖೆಯವರು ವ್ಯವಸ್ಥೆ ಮಾಡಿಕೊಡಬೇಕು. ಆರೋಗ್ಯ ಇಲಾಖೆ ಐ.ಇ.ಸಿ ಕಾರ್ಯಕ್ರಮದ ಮೂಲಕ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ತಳ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಫ್ಲಾಟ್/ಅಪಾರ್ಟ್‌ಮೆಂಟ್‌ಗಳು ಮತ್ತು ಕಟ್ಟಡ ಕಾರ್ಮಿಕರ ಮಕ್ಕಳು, ವಲಸೆ ಬಂದ ಕುಟುಂಬ, ಕೊಳಚೆ ಪ್ರದೇಶದಲ್ಲಿ ವಾಸವಿರುವ 0-5 ವರ್ಷದೊಳಗಿನ ಎಲ್ಲಾ ಮಕ್ಕಳು ಪೋಲಿಯೋ ಹನಿ ಪಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್, ವಿಶ್ವ ಆರೋಗ್ಯ ಸಂಸ್ಥೆಯ ಡಾ. ಸತೀಶ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X