ಹಿಜಾಬ್ ವಿವಾದ; ಮುಸ್ಲಿಮ್ ಒಕ್ಕೂಟದಿಂದ ದ.ಕ. ಜಿಲ್ಲಾಧಿಕಾರಿಯ ಭೇಟಿ

ಮಂಗಳೂರು, ಫೆ.18: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ತಪ್ಪಾಗಿ ಗ್ರಹಿಸಿ ಹಲವು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಿಸಲಾದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ನಿಯೋಗವು ಶುಕ್ರವಾರ ದ.ಕ.ಜಿಲ್ಲಾಧಿಕಾರಿಯನ್ನು ಭೇಟಿ ನೀಡಿ ಚರ್ಚಿಸಿವೆ.
ಜಿಲ್ಲೆಯಲ್ಲೂ ನ್ಯಾಯಾಲಯದ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಹಾಗಾಗಿ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಪ್ರವೇಶವನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಲಾಯಿತು.
ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ನೇತೃತ್ವದ ನಿಯೋಗದಲ್ಲಿ ಅಬೂಬಕ್ಕರ್ ಕುಳಾಯಿ, ಅಬ್ದುಲ್ ಜಲೀಲ್ ಕೃಷ್ಣಾಪುರ, ಮುಸ್ತಫಾ ಸಿ.ಎಂ, ಮೊಯಿದಿನ್ ಮೋನು, ವಿ.ಎಚ್.ಕರೀಮ್, ಬಶೀರ್ ಹೊಕ್ಕಾಡಿ, ನೌಶಾದ್ ಬಂದರ್, ಅನ್ವರ್ ಸಾದತ್ ಬಜತ್ತೂರು ಮತ್ತಿತರರಿದ್ದರು.
Next Story





