Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮದ ಚೌಕಟ್ಟು ಮೀರಬಾರದು; ಖಾಝಿ ಕೂರತ್...

ಧರ್ಮದ ಚೌಕಟ್ಟು ಮೀರಬಾರದು; ಖಾಝಿ ಕೂರತ್ ತಂಙಳ್

ಕಾಜೂರು ಉರೂಸ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ18 Feb 2022 10:31 PM IST
share
ಧರ್ಮದ ಚೌಕಟ್ಟು ಮೀರಬಾರದು; ಖಾಝಿ ಕೂರತ್ ತಂಙಳ್

ಬೆಳ್ತಂಗಡಿ; ನಮ್ಮ ಜೀವನದ ಎಲ್ಲಾ  ಸಂಭ್ರಮದ ಜೊತೆಗೆ ಇಸ್ಲಾಂ ಧರ್ಮದ ಮೂಲ ಆಶಯ ಮತ್ತು ಚೌಕಟ್ಟು ಮೀರಬಾರದು ಎಂದು ದ.ಕ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ, ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಙಳ್ ನಿರ್ದೇಶಿಸಿದ್ದಾರೆ.

ಕಾಜೂರು ಮತ್ತು ಕಿಲ್ಲೂರು ಜಂಟಿ ಜಮಾಅತ್ ಸಹಯೋಗದೊಂದಿಗೆ ಫೆ.18 ರಿಂದ ಫೆ‌.27 ರ ವರೆಗೆ ನಡೆಯಲಿರುವ ಕಾಜೂರು ಉರೂಸ್ ಮಹಾ ಸಂಭ್ರಮದ  ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಖಾಝಿ ಎಂದರೆ ಧರ್ಮದ ನ್ಯಾಯಾಧೀಶರಿದ್ದಂತೆ. ಅವರ ಆಜ್ಞೆ ಪಾಲಿಸುವ ಧರ್ಮ ಸಂಸ್ಕಾರದ ನಡೆ ನಮ್ಮದಾಗಬೇಕು. ದರ್ಗಾ ಶರೀಫ್ ನಲ್ಲಿ‌ ನೆಲೆಗೊಂಡಿರುವ ಅಲ್ಲಾಹನ ಔಲಿಯಾಗಳಿಗೆ ಎಂದೂ ಉರೂಸೇ ಆಗಿದೆ. ನಾವು ಮಾತ್ರ ನಾವು ವರ್ಷಕ್ಕೊಮ್ಮೆ ಆಚರಿಸುವುದಾಗಿದೆ ಎಂದರು.

ಉರೂಸ್ ಸಮಾರಂಭ ಉದ್ಘಾಟಿಸಿದ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ಮಾತನಾಡಿ, ಉರೂಸ್ ಎಂಬುದು ಭೂ‌ಲೋಕಕ್ಕೆ ಸಂಬಂಧಿಸಿದ್ದಲ್ಲ. ಇದರ ಉದ್ದೇಶ ಪರಲೋಕ ವಿಜಯವಾಗಿದೆ. ಇಲ್ಲಿನ ಪುಣ್ಯ ಮಣ್ಣಿನಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಅಲ್ಲಾಹನ‌ ಇಷ್ಟ ದಾಸರಾದ ಔಲಿಯಾಗಳ ನಡೆ ನುಡಿ ಪಾಲಿಸಿ ಪರಲೋಕದ ವಿಜಯಕ್ಕಾಗಿ ದುಡಿಯೋಣ ಎಂದರು.

ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು‌ ಇಬ್ರಾಹಿಂ  ಧ್ವಜಾರೋಹಣ ನೆರವೇರಿಸಿ ಬಳಿಕದ ಸಮಾರಂಭದಲ್ಲಿ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಜೂರು ಶಿಕ್ಷಣ‌ ಸಂಸ್ಥೆಗಳ ಪ್ರಾಚಾರ್ಯ ಹಾಗೂ  ಧರ್ಮಗುರುಗಳಾದ ಸಯ್ಯಿದ್ ಕಾಜೂರು ತಂಙಳ್ ಶುಭ ಕೋರಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಕೆ ಶೇಖಬ್ಬ ಕುಕ್ಕಾವು, ಎಂ.ಎ‌ ಕಾಸಿಂ ಮಲ್ಲಿಗೆಮನೆ, ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ, ಕರ್ನಾಟಕ ಮುಸ್ಲಿಂ ಜಮಾಅತ್ ತಾ.‌ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫಿ ಶುಭ ಕೋರಿದರು.

ವೇದಿಕೆಯಲ್ಲಿ ಉರೂಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಮ್ ಕಮಾಲ್, ಉಪಾಧ್ಯಕ್ಷ ಬಿ.ಹೆಚ್ ಅಬೂಬಕ್ಕರ್ ಹಾಜಿ, ಜೊತೆ ಕಾರ್ಯದರ್ಶಿ ಅಶ್ರಫ್ ಕಿಲ್ಲೂರು,  ಕಾಜೂರು ಮಾಜಿ ಅಧ್ಯಕ್ಷರುಗಳಾದ ಬಿ.ಎ ಯೂಸುಫ್ ಶರೀಫ್, ಕೆ.ಯು ಉಮರ್ ಸಖಾಫಿ,‌ ಇಬ್ರಾಹಿಂ ಮುಸ್ಲಿಯಾರ್, ಎಸ್‌ಎಮ್‌ಎ ಪದಾಧಿಕಾರಿ ವಝೀರ್ ಬಂಗಾಡಿ, ಕಾಜೂರು ಮುದರ್ರಿಸ್ ಅಬ್ದುಲ್ ಖಾದರ್ ಸ‌ಅದಿ, ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಮೀದ್ ನೆಕ್ಕರೆ, ಮುಹಮ್ಮದ್ ಕಿಲ್ಲೂರು ಮೊದಲಾದವರು ಉಪಸ್ಥಿತರಿದ್ದರು.

ಕಾಜೂರು ಸಹಾಯಕ ಧರ್ಮಗುರು ರಶೀದ್ ಮದನಿ ಕಾರ್ಯಕ್ರಮ ನಿರೂಪಿಸಿದರು. ಕಿಲ್ಲೂರು ಮಸ್ಜಿದ್ ಧರ್ಮಗುರುಗಳಾದ ರಫೀಕ್ ಸ‌ಅದಿ ಖಿರಾಅತ್ ಪಠಿಸಿದರು.  ಪ್ರ.ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ವಂದಿಸಿದರು.

ಉದ್ಘಾಟನೆಗೂ ಮುನ್ನ ಕಾಜೂರು ಎರಡೂ ದರ್ಗಾ ಶರೀಫ್ ನಲ್ಲಿ ಕೂರತ್ ತಂಙಳ್ ನೇತೃತ್ವದಲ್ಲಿ ವಿಶ್ವ ಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಸಂಪ್ರದಾಯದಂತೆ ಶುಕ್ರವಾರದ ಜುಮಾ ನಮಾಝ್ ನಂತರ ಕಿಲ್ಲೂರು ಜಮಾಅತ್ ನಿಂದ ಸಂದಲ್ ಮೆರವಣಿಗೆ ಆಗಮಿಸಿ ಸಾಮೂಹಿಕ ಅನ್ನದಾನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X