Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೌಹಾರ್ದ ಕಾಪಾಡಬೇಕಾಗಿದೆ

ಸೌಹಾರ್ದ ಕಾಪಾಡಬೇಕಾಗಿದೆ

ವಾರ್ತಾಭಾರತಿವಾರ್ತಾಭಾರತಿ18 Feb 2022 11:44 PM IST
share

ಮಾನ್ಯರೇ,

ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗುವ ವಿಷಯವು ಅತ್ಯಂತ ತೀವ್ರ ವಿವಾದವಾಗಿ ಬೆಳೆದು ಶಾಂತಿ, ಸೌಹಾರ್ದ, ಒಗ್ಗಟ್ಟು ಮತ್ತು ಶೈಕ್ಷಣಿಕ ಶಾಂತಿಯನ್ನು ಕದಡುವ ಮಟ್ಟಕ್ಕೆ ಹೋಗಿರುವ ಪ್ರಕರಣದ ಬಗ್ಗೆ ನಾವೆಲ್ಲರೂ ಅತ್ಯಂತ ಆತಂಕಿತರಾಗಿದ್ದೇವೆ.
ಈ ವಿವಾದ ಹೇಗೆ ಆರಂಭಗೊಂಡಿದ್ದರೂ ಅದೀಗ ಹೆಣ್ಣುಮಕ್ಕಳ ಅದರಲ್ಲೂ ಮುಖ್ಯವಾಗಿ, ಮುಸ್ಲಿಮ್ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕುತ್ತಾಗಿ ಪರಿಣಮಿಸುತ್ತಿದೆ. ಶಿರವಸ್ತ್ರದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಬೇಕಾಗುತ್ತಿದೆ. ಮುಸ್ಲಿಮೇತರ ಮಕ್ಕಳು ಕೂಡ ಈ ವಿವಾದದಿಂದಾಗಿ ಶಿಕ್ಷಣದಿಂದ ದೂರವಾಗುವ ಸ್ಥಿತಿ ನಿರ್ಮಾಣವಾಗಿದೆ.
ಈ ವಿವಾದವು ಎರಡೂ ಕಡೆಯ ಮತೀಯ ಶಕ್ತಿಗಳ ರಾಜಕೀಯ ದುರುಪಯೋಗದ ಅಸ್ತ್ರವಾಗುತ್ತಿದೆ. ಮಕ್ಕಳು ಮತೀಯತೆಯ ರಾಜಕಾರಣಕ್ಕೆ ದಾಳಗಳಾಗುತ್ತಿರುವುದು ವಿಷಾದನೀಯ, ಖಂಡನೀಯ. ಇಂತಹ ಶಕ್ತಿಗಳ ಆಟಕ್ಕೆ ಪೋಷಕರು, ಮಕ್ಕಳು, ಪ್ರಜ್ಞಾವಂತ ನಾಗರಿಕರು ಅವಕಾಶ ನೀಡಬಾರದು ಎಂದು ವಿನಂತಿಸುತ್ತೇವೆ.

ವಸ್ತ್ರ ಸಂಹಿತೆಯ ಹೆಸರಿನಲ್ಲಿ ಶಿಕ್ಷಣದ ಹಕ್ಕಿಗೆ ಎಂದೂ ವಂಚನೆ ಮಾಡಬಾರದು. ಸಮವಸ್ತ್ರವನ್ನು ಉಳಿಸಿಕೊಂಡು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡು ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಇದು ಸಂವಿಧಾನಾತ್ಮಕ ಹಕ್ಕಾಗಿದೆ, ಅದನ್ನು ಉಳಿಸಬೇಕು. ಈ ಒಟ್ಟು ಸನ್ನಿವೇಶವನ್ನು ರಾಜಕೀಯ ಶಕ್ತಿಗಳು ದುರುಪಯೋಗಪಡಿಸಿಕೊಳ್ಳದಂತೆ ತಡೆಯಲು ಎಚ್ಚರವಹಿಸಬೇಕು. ಶೈಕ್ಷಣಿಕ ಶಾಂತಿ ನಮಗೆ ಬೇಕು. ಶಿಕ್ಷಣದ ಹಕ್ಕು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯತೆಯಾಗಬೇಕು. ಈ ಪ್ರಶ್ನೆಯು ಹುಟ್ಟು ಹಾಕಿರುವ ಮತ್ತು ಅದರ ದೀರ್ಘಾವಧಿ ಪರಿಣಾಮಗಳನ್ನು ಗಂಭೀರವಾಗಿ ಅರಿತು ಸೌಹಾರ್ದಯುತವಾಗಿ ಬಗೆಹರಿಯಲು ಸಂಬಂಧಿಸಿದ ಎಲ್ಲಾ ಭಾಗೀದಾರ ಪಕ್ಷಗಳು ಮತ್ತು ಸಮಾಜದ ಜನತೆ ಮುಂದಾಗಬೇಕು ಎಂದು ಕಳಕಳಿಯಿಂದ ವಿನಂತಿಸುತ್ತೇವೆ.

-ಡಾ.ಕೆ. ಮರುಳಸಿದ್ದಪ್ಪ,ಪ್ರೊ.ಬರಗೂರು ರಾಮಚಂದ್ರಪ್ಪ,ಡಾ.ಜಿ. ರಾಮಕೃಷ್ಣ, ಬೊಳುವಾರು ಮಹಮದ್ ಕುಂಞಿ, ಪ್ರೊ.ಅರವಿಂದ ಮಾಲಗತ್ತಿ, ಡಾ.ಎಸ್.ಜಿ. ಸಿದ್ಧರಾಮಯ್ಯ, ಪ್ರೊ.ಪುರುಷೋತ್ತಮ ಬಿಳಿಮಲೆ, ಡಾ.ಬಂಜಗೆರೆ ಜಯಪ್ರಕಾಶ್, ಡಾ.ವಿಜಯಾ, ಡಾ.ಎಚ್.ಎಸ್. ಅನುಪಮಾ, ಡಾ.ವಿನಯಾ ಒಕ್ಕುಂದ, ಡಾ.ಎನ್. ಗಾಯತ್ರಿ, ಪ್ರೊ.ಸುಕನ್ಯಾ ಮಾರುತಿ, ಡಾ.ಕೆ.ಶರೀಫಾ, ಕೆ. ನೀಲಾ, ಡಾ.ವಸುಂದರಾ ಭೂಪತಿ, ಸೂಫಿ ವಲಿಬಾ, ಡಾ. ಪ್ರಭು ಖಾನಾಪುರೆ, ಅಮೀರ್ ಜಾನ್ ಖಾದ್ರಿ, ಮಾವಳ್ಳಿ ಶಂಕರ್, ಲಕ್ಷ್ಮೀ ನಾರಾಯಣ ನಾಗವಾರ, ಫಾ. ಡಾ. ಮನೋಹರಚಂದ್ರ ಪ್ರಸಾದ್, ಪೆರಿಕೋ ಪ್ರಭು, ಮುನೀರ್ ಕಾಟಿಪಳ್ಳ, ಡಾ.ಎಸ್.ವೈ.ಗುರುಶಾಂತ್, ಕೆ.ಎಸ್. ವಿಮಲಾ, ಗೋಪಾಲಕೃಷ್ಣ ಅರಳಹಳ್ಳಿ, ಬಿ. ರಾಜಶೇಖರಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X