Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ...

ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ ಗುರಿ: 3 ಒಡಂಬಡಿಕೆಗಳಿಗೆ ಅಂಕಿತ

ವಾರ್ತಾಭಾರತಿವಾರ್ತಾಭಾರತಿ19 Feb 2022 12:12 AM IST
share
ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ ಗುರಿ: 3 ಒಡಂಬಡಿಕೆಗಳಿಗೆ ಅಂಕಿತ

ಬೆಂಗಳೂರು, ಫೆ.18: ಮಹಿಳಾ ಸ್ವಸಹಾಯ ಗುಂಪುಗಳಿಗೆ ತಂತ್ರಜ್ಞಾನ ತರಬೇತಿ, ಮಾರುಕಟ್ಟೆ ಲಭ್ಯತೆ ಮತ್ತು ಆರ್ಥಿಕ ಸಬಲೀಕರಣವನ್ನು ಸಾಧಿಸಲು ನೆರವಾಗುವ ಗುರಿಯುಳ್ಳ ಮೂರು ಒಡಂಬಡಿಕೆಗಳಿಗೆ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ `ನವೋದ್ಯಮ ಸಮಾವೇಶ’ದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಪ್ರತಿಭಾವಂತರನ್ನು ಆರ್ಥಿಕ ಬೆಳವಣಿಗೆಯಲ್ಲಿ ಸಕ್ರಿಯವಾಗಿ ಮತ್ತು ಗರಿಷ್ಠ ಮಟ್ಟದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಗುರಿಯಾಗಿದೆ ಎಂದರು.

ಈ ನಿಟ್ಟಿನಲ್ಲಿ ಮುಂದುವರಿದ ಕ್ರಮವಾಗಿ 1ಬ್ರಿಡ್ಜ್, ಕ್ಯಾಪ್ಟನ್ ಫ್ರೆಶ್ ಮತ್ತು ಕಲ್ಚರ್ ಸ್ಟ್ರೀಟ್ ಕಂಪನಿಗಳೊಂದಿಗೆ `ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್’ ಅಡಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.
ಈ ಪೈಕಿ `1ಬ್ರಿಡ್ಜ್’ ನವೋದ್ಯಮವು 6 ರಾಜ್ಯಗಳ 8,500 ಹಳ್ಳಿಗಳಲ್ಲಿ ಅಸ್ತಿತ್ವ ಹೊಂದಿದೆ. ಇದರ ಜತೆಗಿನ ಒಡಂಬಡಿಕೆಯಿಂದ ರಾಜ್ಯದಲ್ಲಿ ಗರಿಷ್ಠ 1 ಸಾವಿರ ಸ್ವಸಹಾಯ ಗುಂಪುಗಳಿಗೆ ಡಿಜಿಟಲ್ ತರಬೇತಿ ಸಿಕ್ಕಲಿದ್ದು, ಹೆಚ್ಚುವರಿ ಆದಾಯದ ಹಾದಿಗಳು ತೆರೆದುಕೊಳ್ಳಲಿವೆ. ಜತೆಗೆ ಕಂಪನಿಯ ಮೂಲಕ ಇ-ಕಾಮರ್ಸ್ ಸ್ವರೂಪದ ವಹಿವಾಟಿನ ಅನುಕೂಲ ಸಿಗಲಿದೆ ಎಂದು ಅವರು ಹೇಳಿದರು.

ಇದಲ್ಲದೆ, 1ಬ್ರಿಡ್ಜ್ ಕಂಪನಿಯು ಸಂಜೀವಿನಿ ಯೋಜನೆಯ `ಸಖಿ’ ಉಪಕ್ರಮದಡಿ ಅರ್ಹ ಮಹಿಳೆಯರಿಗೆ ಹೆಚ್ಚಿನ ತರಬೇತಿ ಕೊಡಲಿದ್ದು, ತನ್ನ ಕಾರ್ಯಜಾಲದಲ್ಲಿ ಇವರನ್ನೆಲ್ಲ ಸಲಹೆಗಾರರೆಂದು ತೆಗೆದುಕೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.

`ಕ್ಯಾಪ್ಟನ್ ಫ್ರೆಶ್’ ಸ್ಟಾರ್ಟಪ್ ಜತೆಗಿನ ಒಪ್ಪಂದದಿಂದಾಗಿ ಗ್ರಾಮೀಣ ಪ್ರದೇಶದ ಕೃಷಿ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿಸಿ ಚಿಲ್ಲರೆ ಮಾರುಕಟ್ಟೆಗೆ ತ್ವರಿತ ಗತಿಯಲ್ಲಿ ತಲುಪಿಸಲಾಗುವುದು. ಹಾಗೆಯೇ, `ಕಲ್ಚರ್ ಸ್ಟ್ರೀಟ್’ ಕಂಪನಿಯು ಸ್ವಸಹಾಯ ಸಂಘಗಳಲ್ಲಿ ಸಕ್ರಿಯವಾಗಿರುವ ಮಹಿಳೆಯರು ತಯಾರಿಸುತ್ತಿರುವ ಟೆರಾಕೋಟಾ ಮತ್ತು ಚರ್ಮದ ಬೊಂಬೆಗಳಿಗೆ ಅಗತ್ಯ ಮಾರುಕಟ್ಟೆ ಒದಗಿಸಿ ಕೊಡುವ ಮೂಲಕ, ಮೌಲ್ಯವರ್ಧನೆ ಮಾಡಲಿದೆ. ಜತೆಗೆ, ತಂತ್ರಜ್ಞಾನ ತರಬೇತಿ ಮತ್ತು ನೂತನ ವಿನ್ಯಾಸಗಳನ್ನು ಅಳವಡಿಸಿಕೊಳ್ಳಲು ನೆರವು ನೀಡಲಿದೆ ಎಂದು ಅಶ್ವತ್ಥನಾರಾಯಣ ವಿವರಿಸಿದರು.

100 ಸ್ವಸಹಾಯ ಗುಂಪುಗಳ ದತ್ತು: ಟಿಐಇ ಕಂಪನಿಯು ರಾಜ್ಯದ 100 ಮಹಿಳಾ ಸ್ವಸಹಾಯ ಸಂಘಗಳನ್ನು ದತ್ತು ತೆಗೆದುಕೊಳ್ಳುತ್ತಿದೆ. ಈ ಉಪಕ್ರಮದಡಿ ಕಂಪನಿಯು ಈ ಸ್ವಸಹಾಯ ಗುಂಪುಗಳಿಗೆ ಒಂದು ವರ್ಷದ ಮಟ್ಟಿಗೆ ವೃತ್ತಿಪರ ತರಬೇತಿ ನೀಡಲಿದೆ. ಈ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ರಾಜ್ಯದ ಉಳಿದ ಭಾಗಗಳಲ್ಲೂ ಅಳವಡಿಸಿಕೊಳ್ಳುವ ಚಿಂತನೆ ಇದೆ ಎಂದು ಅವರು ತಿಳಿಸಿದರು.

ಸ್ಟಾರ್ಟಪ್ ಚಾಲೆಂಜ್-2022 ಸ್ಪರ್ಧೆ: `ಸಂಜೀವಿನಿ’ ಯೋಜನೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ನವೋದ್ಯಮಗಳು ನವೀನ ಮಾದರಿಯ ಮತ್ತು ಸಮಕಾಲೀನ ಬೇಡಿಕೆಗಳ ತಕ್ಕ ಉತ್ಪನ್ನಗಳನ್ನು ಉತ್ಪಾದಿಸಲು `ಸಂಜೀವಿನಿ-ಸ್ಟಾರ್ಟಪ್ ಚಾಲೆಂಜ್-2022’ ಸ್ಪರ್ಧೆಗೆ ಅಶ್ವತ್ಥನಾರಾಯಣ ಅವರು ಇದೇ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಿದರು.

ಈ ಸ್ಪರ್ಧೆಯಿಂದಾಗಿ ಇ-ಕಾಮರ್ಸ್, ಲಾಜಿಸ್ಟಿಕ್ಸ್, ಗ್ರಾಮೀಣಾಭಿವೃದ್ಧಿ, ಕೃಷಿ, ಪಶು ಸಂಗೋಪನೆ, ಬ್ರ್ಯಾಂಡಿಂಗ್ ಮತ್ತು ಮಕರ್ಂಡೈಸಿಂಗ್ ಕ್ಷೇತ್ರಗಳಲ್ಲಿ ಸಾಫ್ಟ್ವೇರ್ ಹಾಗೂ ಇಂಟರ್ನೆಟ್ ಆಧಾರಿತ ನಾವೀನ್ಯತಾ ಸಂಶೋಧನೆಗಳಿಗೆ ಉತ್ತೇಜನ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಮಾವೇಶದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಚರಣಜಿತ್ ಸಿಂಗ್, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಜೀವಿನಿ ಮಿಷನ್ ನಿರ್ದೇಶಕಿ ಮಂಜುಶ್ರೀ, ತಮಿಳುನಾಡಿನ ಎನ್‍ಆರ್‍ಎಲ್‍ಎಂ ಮಿಷನ್ ಡೈರೆಕ್ಟರ್ ಪಲ್ಲವಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X