ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು
ಬ್ರಹ್ಮಾವರ, ಫೆ.19: ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗು ತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹನೇಹಳ್ಳಿ ಗ್ರಾಮದ ನಾಯರ್ಬೆಟ್ಟು ಎಂಬಲ್ಲಿ ಫೆ.18 ರಂದು ಸಂಜೆ 7.15ರ ಸುಮಾರಿಗೆ ನಡೆದಿದೆ.
ಮೃತರನ್ನು ನಾಗರಾಜ್ ಕುಂದರ್ ಎಂದು ಗುರುತಿಸಲಾಗಿದೆ. ದ್ಚಿಚಕ್ರ ವಾಹನ ಸವಾರ ಶೇಖರ ಶೆಟ್ಟಿ ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬಂಡಿಮಠ ಕಡೆಯಿಂದ ಬಾರ್ಕೂರು ಕಡೆಗೆ ಬರುತ್ತಿದ್ದ ಸ್ಕೂಟರ್, ಎದುರಿನಿಂದ ನಡೆದುಕೊಂಡು ಹೋಗುತ್ತಿದ್ದ ನಾಗರಾಜ ಕುಂದರ್ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇಬ್ಬರು ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗರಾಜ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿ ಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story