Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯೂನಿಸ್ ಚಂಡಮಾರುತದ ಅಬ್ಬರ: ಬ್ರಿಟನ್...

ಯೂನಿಸ್ ಚಂಡಮಾರುತದ ಅಬ್ಬರ: ಬ್ರಿಟನ್ ನಲ್ಲಿ 13 ಮಂದಿ ಮೃತ್ಯು; 2 ಲಕ್ಷಕ್ಕೂ ಅಧಿಕ ಮನೆಗಳು ಕಗ್ಗತ್ತಲಿನಲ್ಲಿ

ವಾರ್ತಾಭಾರತಿವಾರ್ತಾಭಾರತಿ19 Feb 2022 11:33 PM IST
share
ಯೂನಿಸ್ ಚಂಡಮಾರುತದ ಅಬ್ಬರ: ಬ್ರಿಟನ್ ನಲ್ಲಿ 13 ಮಂದಿ ಮೃತ್ಯು; 2 ಲಕ್ಷಕ್ಕೂ ಅಧಿಕ ಮನೆಗಳು ಕಗ್ಗತ್ತಲಿನಲ್ಲಿ

ಲಂಡನ್, ಫೆ.19: ಪೂರ್ವ ಯುರೋಪ್‌ನಾದ್ಯಂತ ವಿನಾಶಕಾರಿಯಾಗಿ ಪರಿಣಮಿಸಿರುವ ಯೂನಿಸ್ ಚಂಡಮಾರುತದ ಅಬ್ಬರಕ್ಕೆ ನಲುಗಿರುವ ಬ್ರಿಟನ್‌ನಲ್ಲಿ ಕನಿಷ್ಟ 13 ಮಂದಿ ಮೃತಪಟ್ಟಿದ್ದು ಬೃಹತ್ ಮರಗಳು ಉರುಳಿಬಿದ್ದು ವಿದ್ಯುತ್ ಪೂರೈಕೆ ಅಸ್ತವ್ಯಸ್ತಗೊಂಡಿದೆ. ಕನಿಷ್ಟ 2 ಲಕ್ಷ ಮನೆಗಳಿಗೆ ವಿದ್ಯುತ್ ಪೂರೈಕೆ ಕಡಿತಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಬ್ರಿಟನ್, ಐರ್ಲ್ಯಾಂಡ್, ನೆದರ್ಲ್ಯಾಂಡ್, ಬೆಲ್ಜಿಯಂ, ಜರ್ಮನಿ ಮತ್ತು ಪೋಲಂಡ್ನಲ್ಲಿ ಭಾರೀ ಗಾಳಿಯೊಂದಿಗೆ ಬೀಸಿದ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಬೃಹತ್ ಅಲೆಗಳು ಎದ್ದಿವೆ. ಬೃಹತ್ ಮರಗಳು ಬುಡಸಹಿತ ಉರುಳಿ ಬಿದ್ದರೆ ಕಸಕಡ್ಡಿ ಮತ್ತಿತರ ತ್ಯಾಜ್ಯಗಳು ಸುಂಟರಗಾಳಿಯಂತೆ ಆಕಾಶದಲ್ಲಿ ಹಾರಾಡುತ್ತಿದ್ದವು ಎಂದು ವರದಿಯಾಗಿದೆ. ಬ್ರಿಟನ್‌ನಲ್ಲಿ  2 ಲಕ್ಷಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಗಂಟೆಗೆ 122 ಮೈಲು ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಸಾರಿಗೆ ವ್ಯವಸ್ಥೆ ಮೊಟಕುಗೊಂಡಿದೆ. 

ರೈಲಿನಲ್ಲಿ ಸಂಚರಿಸದಂತೆ ರೈಲ್ವೇ ಇಲಾಖೆ ಜನತೆಗೆ ಮುನ್ನೆಚ್ಚರಿಕೆ ರವಾನಿಸಿದೆ. ನೆದರ್ಲ್ಯಾಂಡಿನಲ್ಲಿ ರೈಲ್ವೇ ನೆಟ್ವರ್ಕ್ ಅಸ್ತವ್ಯಸ್ತವಾಗಿದೆ. ಫ್ರಾನ್ಸ್ ಮತ್ತು ಬ್ರಿಟನ್‌ನಿಂದಸಂಚರಿಸುವ ಅಂತರಾಷ್ಟ್ರೀಯ ಹೈಸ್ಪೀಡ್ ರೈಲ್ವೇ ಸೇವೆಗಳಾದ ಯುರೋಸ್ಟಾರ್ ಮತ್ತು ಥಾಲಿಸ್ ಇಂಟರ್ನ್ಯಾಷನಲ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಫ್ರಾನ್ಸ್ನಲ್ಲೂ ರೈಲ್ವೇ ಸೇವೆ ವ್ಯತ್ಯಯಗೊಂಡಿದ್ದು ಸುಮಾರು 75,000 ಮನೆಗಳಿಗೆ ವಿದ್ಯುತ್ ಪೂರೈಕೆ ಮೊಟಕುಗೊಂಡಿದೆ.
 
ಈ ಮಧ್ಯೆ, ಶನಿವಾರ ಇಂಗ್ಲಂಡಿನ ದಕ್ಷಿಣ ತೀರ ಹಾಗೂ ವೇಲ್ಸ್‌ನ ದಕ್ಷಿಣ ಭಾಗದಲ್ಲಿ ಶನಿವಾರ ಹಳದಿ ಎಚ್ಚರಿಕೆಯ ಸಂದೇಶ ಘೋಷಿಸಲಾಗಿದ್ದು , ಸಾಧಾರಣದಿಂದ ಕಡಿಮೆ ತೀವ್ರತೆಯ ಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ಬ್ರಿಟನ್‌ನ ಹವಾಮಾನ ಇಲಾಖೆ ನೀಡಿದೆ. ನವೆಂಬರ್ನಲ್ಲಿ ಬ್ರಿಟನ್‌ನಲ್ಲಿ  ಆರ್ವೆನ್ ಚಂಡಮಾರುತದ ಹಾವಳಿಯಿಂದ ಸುಮಾರು 1 ಮಿಲಿಯನ್ ಮನೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X