Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪಿ.ಎಸ್.ಐ ನೇಮಕಾತಿಗೆ ತಡೆ’ -...

‘ಪಿ.ಎಸ್.ಐ ನೇಮಕಾತಿಗೆ ತಡೆ’ - ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ19 Feb 2022 11:58 PM IST
share
‘ಪಿ.ಎಸ್.ಐ ನೇಮಕಾತಿಗೆ ತಡೆ’ - ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಆರಗ ಜ್ಞಾನೇಂದ್ರ

ಕಲಬುರಗಿ, ಫೆ.19: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಈ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿ, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಇರಲಿದ್ದಾರೆ ಎಂದರು.

ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. 

ಹಿಜಾಬ್ ಪ್ರಕರಣ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಯಾರು ಮಾಡಬಾರದು. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಪ್ರಕರಣದಲ್ಲಿ ಬೆರಳಣಿಕೆ ಕಡೆ ಅನಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಕೆಲವು ದುಷ್ಟಶಕ್ತಿಗಳು, ಸಂಘಟನೆಗಳು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಸರಕಾರವು ಸೂಕ್ಷ್ಮವಾಗಿ ಗಮನಿಸಿದೆ. ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ, ಉಡುಪಿಯಲ್ಲಿ ಇದೇ ವಿಷಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X