Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಂಬ್ಯುಲೆನ್ಸ್ ಸೇವೆಗೆ ಹೊಸರೂಪ, ಆರೋಗ್ಯ...

ಆಂಬ್ಯುಲೆನ್ಸ್ ಸೇವೆಗೆ ಹೊಸರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಒಪ್ಪಿಗೆ: ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ20 Feb 2022 12:03 AM IST
share
ಆಂಬ್ಯುಲೆನ್ಸ್ ಸೇವೆಗೆ ಹೊಸರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಒಪ್ಪಿಗೆ: ಸಚಿವ ಡಾ.ಸುಧಾಕರ್

ಬೆಂಗಳೂರು, ಫೆ. 19: ‘ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ-108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ' ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಆಂಬ್ಯುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಆಂಬ್ಯುಲೆನ್ಸ್ ಸೇವೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರಕಾರ ಹೊಂದಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.

‘ಹಲವು ಸಂದರ್ಭಗಳಲ್ಲಿ ರೋಗಿಯ ಜೀವ ಉಳಿಸಲು ‘ಗೋಲ್ಡನ್ ಅವರ್' ತುಂಬಾ ಮಹತ್ವದ್ದಾಗಿರುತ್ತದೆ.  ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಆತನ/ಆಕೆಯ ಜೀವ ಉಳಿಯುತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಆಂಬ್ಯುಲೆನ್ಸ್ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರಕಾರ ಮುನ್ನುಡಿ ಬರೆದಿದೆ' ಎಂದು ಅವರು ವಿವರಿಸಿದ್ದಾರೆ.

‘ಸರಕಾರ ‘ಆರೋಗ್ಯ ಕರ್ನಾಟಕ' ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲ ಆಯಾಮಗಳಿಂದ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಆಂಬ್ಯುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. 

750 ಆಂಬ್ಯುಲೆನ್ಸ್‍ಗಳು: ‘ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಪ್ರಕಾರ, 1ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೋರ್ಟ್ (ಬಿಎಲ್‍ಎಸ್) ಆಂಬ್ಯುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (ಎಎಲ್‍ಎಸ್) ಆಂಬ್ಯುಲೆನ್ಸ್ ಇರಬೇಕು. ಒಂದು ಆಂಬ್ಯುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಆಂಬ್ಯುಲೆನ್ಸ್ ಒದಗಿಸಬೇಕಾಗುತ್ತದೆ. ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಮಹತ್ವಕಾಂಕ್ಷೆ ಸರಕಾರಕ್ಕಿದೆ.

ಹೀಗಾಗಿ ಆಂಬ್ಯುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710ರಿಂದ 750ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಪೈಕಿ, ಶೇ.40ರಷ್ಟು ಎಎಲ್‍ಎಸ್ ಮತ್ತು ಶೇ.60ರಷ್ಟು ಬಿಎಲ್‍ಎಸ್ ಆಗಿರಲಿವೆ. ಸರಕಾರ ಹೊಸದಾಗಿ 380 ಆಂಬ್ಯುಲೆನ್ಸ್‍ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಆಂಬ್ಯುಲೆನ್ಸ್‍ಗಳು ಹಳೆಯ ಆಂಬ್ಯುಲೆನ್ಸ್‍ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಆಂಬ್ಯುಲೆನ್ಸ್‍ಗಳಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರೆ ಕೇಂದ್ರದ ಉನ್ನತೀಕರಣ: ‘ಆಂಬ್ಯುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಆಂಬ್ಯುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್‍ನ ಸೀಟುಗಳ ಸಂಖ್ಯೆಯನ್ನು 54 ರಿಂದ 75ಕ್ಕೆ ಏರಿಸಲಾಗುತ್ತದೆ. ಈ ಕಮಾಂಡ್ ಸೆಂಟರ್, ಆಂಬ್ಯುಲೆನ್ಸ್‍ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ, ಆಂಬ್ಯುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್‍ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.  

ಹೊಸ ವ್ಯವಸ್ಥೆ: ಹಿಂದೆ ಆಂಬ್ಯುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿ ದರದ ಆಧಾರದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣಮಟ್ಟದ ಕಾರ್ಯನಿರ್ವಹಣೆ ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್‍ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರಕಾರಕ್ಕೆ 500 ಆಂಬ್ಯುಲೆನ್ಸ್‍ಗಳ ಸೇವೆ ನೀಡಿರುವುದು ಸೇರಿದಂತೆ ಹಲವು ನಿಗದಿತ ಷರತ್ತುಗಳನ್ನು ಹೊಸ ಟೆಂಡರ್‍ನಲ್ಲಿ ವಿಧಿಸಲಾಗುತ್ತಿದೆ.

ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರಬೇಕು. ಆಂಬ್ಯುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರಬೇಕೆಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X