Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ...

ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ ತಡೆಯುವುದು ತಪ್ಪು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Feb 2022 2:32 PM IST
share
ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ ತಡೆಯುವುದು ತಪ್ಪು: ಸಿದ್ದರಾಮಯ್ಯ

ಬೆಂಗಳೂರು, ಫೆ.20: ಸಿಂಧೂರ ಆಗಲಿ-ಹಿಜಾಬ್ ಆಗಲಿ ಎರಡು ನಮ್ಮ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ ಎಂದರು.

ಹಿಜಾಬನ್ನು ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಕೇಸರಿ ಶಾಲು ಹಿಂದಿನಿಂದ ಯಾರೂ ಹಾಕುತ್ತಿರಲಿಲ್ಲ. ಹಿಜಾಬ್ ಅನ್ನು ವಿರೋಧಿಸುವುದಕ್ಕೋಸ್ಕರವೇ ಕೇಸರು ಶಾಲು ಹಾಕಿಸುವುದು ಅತ್ಯಂತ ಸಣ್ಣ ತನ. ಇದು ಕೇಸರಿ ಶಾಲಿಗೂ ಮಾಡುವ ಅವಮಾನ ಎಂದು ಸಿದ್ದರಾಮಯ್ಯ ಹೇಳಿದರು.

ಕೇಸರಿ ಶಾಲನ್ನು ಅಮಾನವೀಯ, ಅನಾಗರಿಕ ಕಾರಣಗಳಿಗೆ ಬಳಸಬಾರದು. ಬಿಜೆಪಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು. ಇವರು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಲಿಲ್ಲ. ರಾಷ್ಟ್ರ ಧ್ವಜವನ್ನೂ ಬ್ರಿಟಿಷರ ವಿರುದ್ಧ ಹಿಡಿಯಲಿಲ್ಲ. ಹೀಗಾಗಿ ಇವರ ಮನಸ್ಥಿತಿಯೇ ರಾಷ್ಟ್ರ ಧ್ವಜದ ವಿರುದ್ಧ ಇದೆ ಎಂದರು.

ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ನಿಮಗೆ ಯಾವುದು ಮುಖ್ಯ ಎನ್ನುವ ಪ್ರಶ್ನೆಯನ್ನು ನಾವು ಬಿಜೆಪಿ ಮುಂದಿಟ್ಟೆವು. ಬಿಜೆಪಿ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯ ಎಂದು ಹಠ ಹಿಡಿದು ಕುಳಿದಿದೆ. ರಾಷ್ಟ್ರೀಯ ಲಾಂಛನಗಳಿಗೆ ಅವಮಾನ ಮಾಡುವುದು ರಾಷ್ಟ್ರದ್ರೋಹ ಮತ್ತು ಸ್ಪಷ್ಟ ಕಾನೂನಿನ ಉಲ್ಲಂಘನೆ. “ನಾವು ರಾಷ್ಟ್ರ ಧ್ವಜಕ್ಕಾದರೂ ಅವಮಾನ ಮಾಡುತ್ತೀವಿ, ಕಾನೂನನ್ನೂ ಉಲ್ಲಂಘಿಸುತ್ತೀವಿ. ಯಾರೂ ಪ್ರಶ್ನಿಸಬಾರದು’ಎನ್ನುವ ಬಿಜೆಪಿ  ಧೋರಣೆಯನ್ನು ನಾವು ಪ್ರತಿಭಟಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದ ಮೌಲ್ಯ ಬಿಜೆಪಿಯವರಿಗೆ ಗೊತ್ತಿಲ್ಲವಾದ್ದರಿಂದ ಅವರಿಗೆ ಹುತಾತ್ಮರ ಬೆಲೆ ಕೂಡ ಗೊತ್ತಿಲ್ಲ.  ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷಕ್ಕೆ ನೈತಿಕತೆ ಇಲ್ಲ ಎನ್ನುವ ಮುಖ್ಯಮಂತ್ರಿ ಬೊಮ್ಮಾಯಿಯವರ ಮಾತಿಗೆ ಪ್ರತಿಕ್ರಿಯಿಸಿ, ನಮಗೆ ಬೊಮ್ಮಾಯಿ ಅವರಿಗಿಂತ ಹೆಚ್ಚು ಹೋರಾಟದ ಅನುಭವವಿದೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನ ನಮಗೆ ಗೊತ್ತಿದೆ. ಅವರಿಗೇನು ಗೊತ್ತಿದೆ‌ ಇದೆಲ್ಲಾ. ಹೀಗಾಗಿ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳಿ ಎಂದು ಅವರು ಹೇಳಿದರೆ ನಾವು ಸಹಿಸಿಕೊಳ್ಳಲು ಸಿದ್ದರಿಲ್ಲ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ.

ಬರಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚಿಸುವ ಉದ್ದೇಶದಿಂದ ಮುಂಬರುವ 25ಕ್ಕೆ ಹೈಕಮಾಂಡ್ ನನ್ನನ್ನು ಕರೆದಿದೆ. ಅದಕ್ಕೆ ದಿಲ್ಲಿಗೆ ಹೋಗುತ್ತಿದ್ದೇನೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಾರಥ್ಯದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X