Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಗಿ ಖರೀದಿ ಮೇಲಿನ ನಿರ್ಬಂಧ ತೆರವಿಗೆ...

ರಾಗಿ ಖರೀದಿ ಮೇಲಿನ ನಿರ್ಬಂಧ ತೆರವಿಗೆ ಆಗ್ರಹಿಸಿ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ20 Feb 2022 3:03 PM IST
share
ರಾಗಿ ಖರೀದಿ ಮೇಲಿನ ನಿರ್ಬಂಧ ತೆರವಿಗೆ ಆಗ್ರಹಿಸಿ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಫೆ.20: ರಾಗಿ ಖರೀದಿಗೆ ಸಂಬಂಧಿಸಿ ರಾಜ್ಯಗಳಿಗೆ ವಿಧಿಸಿರುವ ನಿರ್ಬಂಧದಿಂದ ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಕೇಂದ್ರ ಸರಕಾರವು ರಾಗಿ ಖರೀದಿ ಮೇಲಿನ ನಿರ್ಬಂಧವನ್ನು ತೆರವುಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಒತ್ತಾಯಿಸಿದ್ದಾರೆ.

 ಪತ್ರದ ವಿವರ ಇಂತಿದೆ...

ಇಡೀ ವರ್ಷ ಪದೇ ಪದೇ ಸುರಿದ ಮಳೆಯ ನಡುವೆಯೂ ರಾಗಿ, ಭತ್ತ ಮುಂತಾದ ಬೆಳೆಗಳನ್ನು ಕೊಯಿಲು ಮಾಡಿ ಮಾರುಕಟ್ಟೆಗೆ ತರುತ್ತಿದ್ದಾರೆ. ಸರ್ಕಾರವು ಈ ವರ್ಷ ಜನವರಿ 1 ರಿಂದ ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ  ಜಿಲ್ಲೆಗಳ ಪ್ರಮುಖ ಬೆಳೆಯಾದ ರಾಗಿಯನ್ನು ಬೆಳೆಯುತ್ತಾರೆ. ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ನಮ್ಮ ರೈತರು ಈ ವರ್ಷ ಸುಮಾರು 19.35 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಕೃಷಿ ಇಲಾಖೆಯ ದಾಖಲೆಗಳ ಪ್ರಕಾರ ಎಕರೆಗೆ ಕನಿಷ್ಠ 1 ಟನ್ ಎಂದರೂ ಸುಮಾರು 19.3 ಲಕ್ಷ ಟನ್ ಟನ್ ರಾಗಿ ಇಳುವರಿ ಬರುತ್ತದೆ. ಈ ವರ್ಷ ನಿರಂತರವಾಗಿ ಸುರಿದ ಮಳೆಯಿಂದಾಗಿ 4.5 ಲಕ್ಷ ಟನ್ ರಾಗಿಯು ಮಳೆಯ ಪಾಲಾದರೂ 15 ಲಕ್ಷ ಟನ್ ರಾಗಿ ರೈತರ ಕೈಯಲ್ಲಿದೆ, ಹಾಗಾಗಿ ರೈತರು ಬೆಂಬಲ ಬೆಲೆಯಡಿ ರಾಗಿಯನ್ನು ಮಾರಾಟ ಮಾಡಲು 

ಸರ್ಕಾರಗಳು ಪದೇ ಪದೇ  ರೈತರ ಆದಾಯ ದ್ವಿಗುಣ ಗೊಳಿಸಲಾಗುವುದು ಎಂದು ಹೇಳಲಾಗುತ್ತದೆ. ಆದರೆ ರೈತರ ಆದಾಯ ಹೆಚ್ಚಾಗುವ ಬದಲು ಕಡಿಮೆಯಾಗುತ್ತಿದೆ.  ಅದರಲ್ಲೂ ಮಳೆಯಾಶ್ರಿತ ಪ್ರದೇಶಗಳಲ್ಲಿ ಬೆಳೆಯುವ ರಾಗಿಯು ಲಾಭದಾಯಕ ಬೆಳೆಯಲ್ಲ. ಖರ್ಚು ಹೆಚ್ಚು ಲಾಭ ಕಡಿಮೆ. ಹಾಗಾಗಿ ಸರ್ಕಾರಗಳು ಈ ರೀತಿಯ ಬೆಳೆಗಳಿಗೆ ಹೆಚ್ಚು ಬೆಲೆಯನ್ನು ನಿಗದಿಪಡಿಸಿ ರೈತರು ಮಾರುಕಟ್ಟೆಗೆ ತರುವಷ್ಟು ಉತ್ಪನ್ನವನ್ನೂ ಖರೀದಿಸಬೇಕು. ರಾಗಿ, ಜೋಳದಂಥ ಮಳೆಯಾಶ್ರಿತ ಬೆಳೆಗಳನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಇದೆ, ಏಕೆಂದರೆ ಈ ಬೆಳೆಗಳು ಹೆಚ್ಚು ನೀರನ್ನು ಬಯಸುವುದಿಲ್ಲ. ಸರಕಾರಗಳು ಈ ರೈತರಿಗೆ ಸಬ್ಸಿಡಿಗಳನ್ನೇನೂ ನೀಡುತ್ತಿಲ್ಲ. ಈ ಬೆಳೆಗಳನ್ನು ಬೆಳೆಯುವುದರಿಂದ ನಿಸರ್ಗದ ರಕ್ಷಣೆಯೂ ಆಗುತ್ತದೆ. ಔಷಧ, ಕೀಟನಾಶಕ, ರಾಸಾಯನಿಕಗಳಿಲ್ಲದೆ ಬೆಳೆಯುವ ರಾಗಿ, ಜೋಳ ಮುಂತಾದ ಬೆಳೆಗಳು ನಿಸರ್ಗಸ್ನೇಹಿಯಾಗಿವೆ. ಹಾಗಾಗಿ ಇವುಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು.

  ಆದರೆ ರಾಗಿಗೆ ಈಗ ದೊರೆಯುತ್ತಿರುವ ಬೆಲೆಯು ಯಾವುದಕ್ಕೂ ಸಾಲುವುದಿಲ್ಲ. ರಾಗಿಗೆ ನೀಡುತ್ತಿರುವ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದು ಕ್ವಿಂಟಾಲಿಗೆ ಕೇವಲ 82 ರೂಪಾಯಿಗಳಷ್ಟು ಮಾತ್ರ ಏರಿಕೆ ಮಾಡಲಾಗಿದೆ. ಕಳೆದ ವರ್ಷ ಒಂದು ಕ್ವಿಂಟಾಲಿಗೆ 3,295 ರೂ ನೀಡುತ್ತಿದ್ದರೆ ಈ ವರ್ಷ 3,377 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆದರೆ ರೈತರು 2019-20 ರಲ್ಲಿ ಟ್ರಾಕ್ಟರ್‍ನಲ್ಲಿ ಒಂದು ಗಂಟೆ ಹೊಲ ಉಳಲು 750 ರೂಪಾಯಿ ನೀಡುತ್ತಿದ್ದರೆ, ಈ ವರ್ಷ 1,250-1,300 ರೂ ನೀಡಬೇಕಾಗಿದೆ. ಬೆಳೆಯನ್ನು ಕಟಾವು ಮಾಡುವ ಯಂತ್ರಕ್ಕೆ ಕೂಡ ಗಂಟೆಗೆ ಸುಮಾರು 750 ರೂಪಾಯಿಗಳಷ್ಟು ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಅವಶ್ಯ ವಸ್ತುಗಳ ಬೆಲೆ ಏರಿಕೆಯಾಗಿವೆ. ಇದೆಲ್ಲದರಿಂದಾಗಿ ರೈತರು ಬೆಳೆಗಳನ್ನು ಬೆಳೆಯಲು ಉತ್ಪಾದನಾ ವೆಚ್ಚ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಡಾ.ಸ್ವಾಮಿನಾಥನ್ ಅವರ ವರದಿಯಲ್ಲಿನ ಸೂತ್ರಗಳನ್ನು ಪೂರ್ತಿಯಾಗಿ ಅಳವಡಿಸಿದರೆ ಒಂದು ಕ್ವಿಂಟಾಲ್ ರಾಗಿಗೆ ಈಗ ನಿಗದಿಪಡಿಸಿರುವ ಬೆಂಬಲ ಬೆಲೆಯ ಎರಡರಷ್ಟನ್ನು ರೈತರಿಗೆ ನೀಡಬೇಕಾಗುತ್ತದೆ.

        ಆದರೂ ರೈತರು ನಿಗದಿಪಡಿಸಿರುವ  ಬೆಂಬಲ ಬೆಲೆಯಾದರೂ ತಮ್ಮ ಬೆಳೆಗಳಿಗೆ ಸಿಗಲಿ ಎಂದು ಆಶಿಸುತ್ತಿದ್ದಾರೆ. ಏಕೆಂದರೆ ಮುಕ್ತ ಮಾರುಕಟ್ಟೆಯಲ್ಲಿ ರಾಗಿಯ ಬೆಲೆ ಪ್ರತಿ ಕ್ವಿಂಟಾಲಿಗೆ 1800 ರೂಪಾಯಿಗಳಿಂದ 2180 ರೂಪಾಯಿಗಳಷ್ಟೇ ಇದೆ. ಕೇಂದ್ರ ಸರಕಾರ ಈ ಬಾರಿ ರಾಜ್ಯದ ರೈತರಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಮಾತ್ರ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸೂಚನೆಯನ್ನು ಆಧರಿಸಿ ರಾಜ್ಯ ಸರ್ಕಾರವು ರೈತರಿಂದ ರಾಗಿ ಖರೀದಿಸಲು ವಿಪರೀತ ನಿಬಂಧನೆಗಳನ್ನು ವಿಧಿಸಿದೆ. ಅದರಲ್ಲಿ ಸಣ್ಣ ರೈತರಿಂದ ಮಾತ್ರ ಕೇವಲ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿ ಮಾಡಲಾಗುವುದೆಂದು ತಿಳಿಸಿ ಆದೇಶ ಹೊರಡಿಸಿದೆ. ಯೂಕಲಿಪ್ಟಸ್ ಬೆಳೆಯನ್ನು ಬೆಳೆಯುತ್ತಿದ್ದ ರೈತರು ಕಳೆದ ಎರಡು ವರ್ಷಗಳಿಂದ ಈಚೆಗೆ ತಮ್ಮ ಹೊಲಗಳಲ್ಲಿ ಬೆಳೆದಿದ್ದ ಯೂಕಲಿಪ್ಟಸ್ ಬೆಳೆಯನ್ನು ತೆಗೆದು ಹಾಕಿ ರಾಗಿ ಬೆಳೆಯಲಾರಂಭಿಸಿದ್ದಾರೆ. ಹಾಗಾಗಿ ಸಹಜವಾಗಿಯೆ ರಾಗಿಯ ಉತ್ಪಾದನೆ ಹೆಚ್ಚಾಗಿದೆ.

        ದೊಡ್ಡಬಳ್ಳಾಪುರ ಮುಂತಾದ ಕಡೆ ರೈತರು, ರೈತ ಸಂಘದವರು ರಾಗಿ ಖರೀದಿಗೆ ವಿಧಿಸಿರುವ ನಿಬಂಧನೆಗಳನ್ನು ತೆಗೆದು ಹಾಕುವಂತೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.  ಕಳೆದ ವರ್ಷ ಸುಮಾರು 4.7 ಲಕ್ಷ ಟನ್ ಗಳಷ್ಟು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ಈ ಬಾರಿ ರಾಜ್ಯದಿಂದ ಕೇವಲ 2.10 ಲಕ್ಷ ಟನ್ ರಾಗಿಯನ್ನು ಖರೀದಿಸಲು ಮಾತ್ರ ರಾಜ್ಯಕ್ಕೆ ಅನುಮತಿ ನೀಡಲಾಗಿದೆ. ರೈತರು 15 ಲಕ್ಷ ಟನ್ ರಾಗಿ ಬೆಳೆದರೆ ಅವರು ತಮ್ಮ ಸ್ವಂತ ಬಳಕೆಗೆ ಶೇ.50 ರಷ್ಟನ್ನು ಬಳಸುತ್ತಾರೆಂದರೆ ಉಳಿದದ್ದನ್ನು ಅವರು ಮಾರಲೇಬೇಕು. ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರೈತರ ಉತ್ಪನ್ನಗಳನ್ನು ಖರೀದಿಸದಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ  ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಬೆಲೆಗಳು ಬಿದ್ದು ಹೋಗುತ್ತವೆ. ಹೀಗಾದರೆ ರೈತರ ಹಿತಾಸಕ್ತಿಯನ್ನು ಕಾಪಾಡುವುದು ಹೇಗೆ? ರೈತರ ಆದಾಯ ದ್ವಿಗುಣಗೊಳ್ಳುವುದು ಹೇಗೆ? ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡುವುದನ್ನು ನಿಲ್ಲಿಸಿರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ಈಗಾಗಲೆ ರಾಗಿಯ ಬೆಲೆ ಕಡಿಮೆಯಾಗಿ ಈಗ ಕೇವಲ 1800 ರೂಗಳಿಂದ 2180 ರೂವರೆಗೆ ಮಾತ್ರ ಮಾರಾಟವಾಗುತ್ತಿದೆ. ಇದರಿಂದ ಪ್ರತಿ ಕ್ವಿಂಟಾಲ್‍ಗೆ ರೈತರಿಗೆ ಸರಾಸರಿ 1377 ರೂಗಳಷ್ಟು ನಷ್ಟವಾಗುತ್ತಿದೆ. ಈ ಲೆಕ್ಕದಲ್ಲಿ ನೋಡಿದರೆ ಮಾರುಕಟ್ಟೆಗೆ 8 ಲಕ್ಷ ಟನ್ ರಾಗಿ ಬಂದರೆ 2.1 ಲಕ್ಷ ಟನ್ನನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಉಳಿಕೆ 6 ಟನ್ ರಾಗಿ ಬೆಳೆದ ರೈತರಿಗೆ ಕನಿಷ್ಟ 1000 ಕೋಟಿ ನಷ್ಟವಾಗುತ್ತದೆ.

        ಆದ್ದರಿಂದ  ಈ ಕೂಡಲೆ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರೈತರು ಎಷ್ಟು ಕ್ವಿಂಟಾಲ್ ಖರೀದಿ ಕೇಂದ್ರಗಳಿಗೆ  ತರುತ್ತಾರೊ ಅಷ್ಟನ್ನೂ ಖರೀದಿಸಬೇಕು.  ಇಂದೇ ಕೇವಲ 2.10 ಲಕ್ಷ ಟನ್ ಖರೀದಿಸಲು ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕು. ಸ್ಥಗಿತಗೊಳಿಸಿರುವ ನೋಂದಣಿ ಕೇಂದ್ರಗಳನ್ನು ಕೂಡಲೆ ಪುನರಾರಂಭಿಸಬೇಕು. ರಾಗಿ, ಭತ್ತ  ಮುಂತಾದ ಉತ್ಪನ್ನಗಳಿಗೆ ನಿಗದಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X