ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಮೃತ ಯುವಕ ಹರ್ಷ
ಶಿವಮೊಗ್ಗ: ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಭಾರತಿ ಕಾಲನಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬಜರಂಗ ದಳದ ಕಾರ್ಯಕರ್ತ ಹರ್ಷ ಎಂದು ಗುರುತಿಸಲಾಗಿದೆ.
ಇಂದು (ರವಿವಾರ) ರಾತ್ರಿ ಹತ್ತು ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ಹಿನ್ನೆನೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿದ್ದಾರೆ. ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ನಡೆದಿದ್ದು, ಲಘ ಲಾಠಿ ಪ್ರಹಾರ ನಡೆಸಿದ ಪೊಲೀಸರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಈ ಕುರಿತ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಪದವಿ ಪೂರ್ವ ಶಿಕ್ಷಣ ಇಲಾಖಾ ಉಪನಿರ್ದೇಶಕರ ಆದೇಶದಂತೆ ನಾಳೆ (ಫೆ.21ರಂದು) ನಗರದ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.





