ಆಂಧ್ರಪ್ರದೇಶ: ಸಚಿವ ಗೌತಮ್ ರೆಡ್ಡಿ ಹೃದಯಾಘಾತದಿಂದ ನಿಧನ

ಗೌತಮ್ ರೆಡ್ಡಿ (Photo: twitter)
ಹೈದರಾಬಾದ್: ಆಂಧ್ರಪ್ರದೇಶದ ಐಟಿ ಹಾಗೂ ಕೈಗಾರಿಕಾ ಸಚಿವ ಗೌತಮ್ ರೆಡ್ಡಿ(50 ವರ್ಷ) ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರೆಡ್ಡಿ ಅವರು ನೆಲ್ಲೂರು ಜಿಲ್ಲೆಯ ಆತ್ಮಕೂರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2019 ಹಾಗೂ 2014ರಲ್ಲಿ ಆಂಧ್ರ ಪ್ರದೇಶ ವಿಧಾನಸಭೆಗೆ ಆತ್ಮಕೂರ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ರೆಡ್ಡಿ ಅವರು ನೆಲ್ಲೂರು ಮಾಜಿ ಸಂಸದ ಮೇಕಪಾಟಿ ರಾಜಮೋಹನ್ ರೆಡ್ಡಿ ಅವರ ಪುತ್ರ.
Next Story





