ಶಿವಮೊಗ್ಗದಲ್ಲಿ ಯುವಕನ ಹತ್ಯೆ ಹಿನ್ನೆಲೆ: ಭದ್ರಾವತಿ ಪಟ್ಟಣದಲ್ಲೂ ನಿಷೇಧಾಜ್ಞೆ ಜಾರಿ, ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ಅವರು ಆದೇಶ ಹೊರಡಿಸಿದ್ದಾರೆ.
ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ
ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು ಮುಚ್ಚಬೇಕು, ಚಲನಚಿತ್ರ ಪ್ರದರ್ಶನ ನಿಷೇಧಿಸಲಾಗಿದೆ.
ಶಾಲೆಗಳಿಗೆ ರಜೆ ಘೋಷಣೆ:
ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಫೆ.21ರಂದು 1 ರಿಂದ 10 ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.





