Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ...

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 Feb 2022 12:19 PM IST
share
ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು : ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ  ಹೇಳಿದ್ದಾರೆ. 

ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಕೊಲೆ ನಡೆದಿದೆ. ಹೀಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದರು.

ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, ಆರಗ ಜ್ಞಾನೇಂದ್ರ ಇದಕ್ಕೆ ಜವಾಬ್ದಾರರು ಎಂದು ಹೇಳಿದರು.

ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕಠಿಣವಾದ ತನಿಖೆ ಮಾಡಲಿ. ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಯಾರ ಮೇಲೋ ಆರೋಪ ಮಾಡುವುದಲ್ಲ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ ಎಂದು ಒತ್ತಾಯಿಸಿದರು. 

ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಘಟನೆ ಹಿನ್ನೆಲೆಯಲಿ ಅವರು ರಾಜಿನಾಮೆ ಕೊಡಬೇಕು. ಆದರೆ, ಅವರು ಭಂಡರು. ರಾಜಿನಾಮೆ ಕೊಡುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ಕೆ.ಜೆ. ಜಾರ್ಜ್ ಅವರು ರಾಜಿನಾಮೆ ಕೊಟ್ಟಿದ್ದರು. ರಾಜಿನಾಮೆ ಕೊಡುವುದೇ ಇಲ್ಲ ಎಂದು ಹೇಳಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. 

ಸದನ ನಡೆಸಲು ಕಾಂಗ್ರೆಸ್‍ನವರಿಗೆ ಆಸಕ್ತಿ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಆಗುವಂಥ ಹೇಳಿಕೆ ನೀಡಿದಾಗ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಾರೆ ಎಂದು ಬಿಜೆಪಿಯವರಿಗೆ ಗೊತ್ತು.  40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಹಗರಣದ ಬಗ್ಗೆ ನಾವು ಪ್ರಸ್ತಾಪ ಮಾಡುತ್ತೇವೆ ಎಂಬ ಕಾರಣಕ್ಕೆ ಸದನ ನಡೆಯುವುದು ಅವರಿಗೂ ಇಷ್ಟವಿಲ್ಲ. ಹೀಗಾಗಿಯೇ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸುತ್ತಿಲ್ಲ ಎಂದು ಹೆಳಿದರು. 

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ್ ಅವರು ಸಂಧಾನಕ್ಕೆ ಬಂದಾಗ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸಿ, ನಾವು ಸದನಕ್ಕೆ ಹಾಜರಾಗುತ್ತೇವೆ ಎಂದು ಹೇಳಿದ್ದೆವು. 

ದೇಶದ ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಈಶ್ವರಪ್ಪ ಅವರು ಅವಮಾನ ಮಾಡಿದಾಗ ಸುಮ್ಮನೆ ಕೂರಲು ಆಗುವುದಿಲ್ಲ ಎಂದಿದ್ದೆವು. ಆದರೆ, ಅದಕ್ಕೆ ಅವರು ಒಪ್ಪಲು ತಯಾರಿಲ್ಲ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೇ ಕಾಳಜಿ ಇಲ್ಲ. ಈಶ್ವರಪ್ಪ ಅವರು ರಾಜಿನಾಮೆ ಕೊಟ್ಟಿದ್ದರೆ ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಿದ್ದರೆ ನಾವೇಕೆ ಧರಣಿ ಮಾಡುತ್ತಿದ್ದೆವು ಎಂದು ಹೇಳಿದರು. 

ಜೆಡಿಎಸ್ ಶಾಸಕರು  ನಮ್ಮ  ವಿರುದ್ಧ ಪ್ರತಿಭಟನೆ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ನಾವು ನಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಅವರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಾಗ ಮೌನದಿಂದ ಇರಲು ಸಾಧ್ಯವೇ ? ಒಂದು ವೇಳೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X